ನವದೆಹಲಿ: ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿಯ ಸಿಂಘು ಗಡಿಯಲ್ಲಿ 45 ವರ್ಷದ ರೈತರೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನವದೆಹಲಿ: ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿಯ ಸಿಂಘು ಗಡಿಯಲ್ಲಿ 45 ವರ್ಷದ ರೈತರೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ರೈತರನ್ನು ಫತೇಹ್‌ಗಡ ಸಾಹಿಬ್ ಜಿಲ್ಲೆಯ ಗುರ್‌ಪ್ರೀತ್ ಸಿಂಗ್ ಎಂದು ಗುರ್ತಿಸಲಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೋನಿಪತ್‌ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಂಡ್ಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನವೆಂಬರ್ 2020ರಿಂದ ನೂರಾರು ಸಂಖ್ಯೆಯ ರೈತರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಒದಗಿಸುವ ಹೊಸ ಕಾಯ್ದೆಗೆ ಅವರು ಒತ್ತಾಯಿಸುತ್ತಿದ್ದಾರೆ.
ಈವರೆಗೆ, ಸರ್ಕಾರ ಮತ್ತು ರೈತ ಸಂಘಟನೆಗಳ ನಡುವೆ 11 ಸುತ್ತುಗಳ ಮಾತುಕತೆ ನಡೆದಿದೆ. ಸರ್ಕಾರ ಮಾತ್ರ ಈ ಕಾಯ್ದೆಗಳು ರೈತರ ಪರವಾಗಿವೆ ಎಂದೇ ವಾದಿಸುತ್ತಿದೆ. ಆದರೆ, ಇದರಿಂದಾಗಿ ನಾವು ಕಾರ್ಪೊರೇಟ್ ಕಂಪನಿಗಳ ಮುಂದೆ ಬೇಡುವ ಸ್ಥಿತಿ ಬರಲಿದೆ ಎಂದು ರೈತರು ಹೇಳುತ್ತಿದ್ದಾರೆ.