ಕಾಸರಗೋಡು: ವಿವಿಧ ವಿದ್ಯಾ ಸಂಸ್ಥೆಗಳಲ್ಲಿ ಕಲಿಕೆ ನಡೆಸುತ್ತಿದ್ದು, ದಿನನಿತ್ಯ ಸಂಚಾರ ನಡೆಸುವ ಜಿಲ್ಲೆಯ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ರಿಯಾಯಿತಿ ಸೌಲಭ್ಯ ನೀಡಬೇಕು ಎಂದು ಜಿಲ್ಲಾ ಅಭಿವೃದ್ಧಿ ಸಮಿತಿ ಸಭೆ ಆಗ್ರಹಿಸಿದೆ.
ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣ್ ವೀರ್ ಚಂದ್ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಎ.ಕೆ.ಎಂ.ಅಶಾರಫ್, ಎನ್.ಎ.ನೆಲ್ಲಿಕುನ್ನು, ಇ.ಚಂದ್ರಶೇಖರನ್, ಸಿ.ಎಚ್.ಕುಂಞಂಬು ನೀಲೇಶ್ವರ ನಗರಸಭೆ ಅಧ್ಯಕ್ಷೆ ಟಿ.ವಿ.ಶಾಂತಾ, ಜಿಲ್ಲಾ ಯೋಜನೆ ಅಧಿಕಾರಿ ಎ.ಎಸ್.ಮಾಯಾ ಮೊದಲಾದವರು ಉಪಸ್ಥಿತರಿದ್ದರು. ವಿವಿಧ ವಿಚಾರಗಳಲ್ಲಿ ಚರ್ಚಿಸಲಾಯಿತು.