HEALTH TIPS

ಪ್ರಯಾಗ್ ರಾಜ್: ಸ್ವಸಹಾಯ ಸಂಘಗಳಿಗೆ ₹ 1000 ಕೋಟಿ ಬಿಡುಗಡೆ ಮಾಡಿದ ಮೋದಿ

         ಪ್ರಯಾಗ್ ರಾಜ್ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 16 ಲಕ್ಷ ಮಹಿಳೆಯರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸ್ವಸಹಾಯ ಸಂಘಗಳ ಬ್ಯಾಂಕ್ ಖಾತೆಗಳಿಗೆ ₹1,000 ಕೋಟಿ ಹಣ ವರ್ಗಾವಣೆ ಮಾಡಿದ್ದಾರೆ.

         ಈ ಮೊತ್ತವನ್ನು ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ವರ್ಗಾಯಿಸಲಾಗಿದೆ.

        ಮಹಿಳೆಯರಿಗೆ, ವಿಶೇಷವಾಗಿ ತಳಮಟ್ಟದಲ್ಲಿರುವವರಿಗೆ ಅಗತ್ಯ ಕೌಶಲ್ಯ, ಪ್ರೋತ್ಸಾಹ ಮತ್ತು ಸಂಪನ್ಮೂಲಗಳನ್ನು ಒದಗಿಸುವ ಗುರಿಯನ್ನು ಈ ಮಿಷನ್ ಹೊಂದಿದೆ.

           ಕಾರ್ಯಕ್ರಮದಲ್ಲಿ 2 ಲಕ್ಷಕ್ಕೂ ಅಧಿಕ ಮಹಿಳೆಯರು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಿದ್ದರು.

             ಮುಖ್ಯಮಂತ್ರಿ ಕನ್ಯಾ ಸುಮಂಗಲಾ ಯೋಜನೆಯಡಿ 1 ಲಕ್ಷ ಫಲಾನುಭವಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ₹20 ಕೋಟಿ ರೂಪಾಯಿಗಳನ್ನೂ ಸಹ ಮೋದಿ ಬಿಡುಗಡೆ ಮಾಡಿದರು. ಈ ಯೋಜನೆಯಡಿ ಪ್ರತಿ ಫಲಾನುಭವಿಗೆ ₹ 15,000 ಸಿಗಲಿದೆ.

          43 ಜಿಲ್ಲೆಗಳಲ್ಲಿ 202 ಪೂರಕ ಪೌಷ್ಟಿಕಾಂಶ ಉತ್ಪಾದನಾ ಘಟಕಗಳ ಶಂಕುಸ್ಥಾಪನೆಯನ್ನೂ ಪ್ರಧಾನಿ ನೆರವೇರಿಸಿದ್ದಾರೆ. ಈ ಘಟಕಗಳಿಗೆ ಸ್ವಸಹಾಯ ಸಂಘಗಳಿಂದ ಹಣ ನೀಡಲಾಗುತ್ತಿದ್ದು, ಪ್ರತಿ ಘಟಕವನ್ನು ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries