ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಾಳೆ ರೈತರಿಗೆ ಹೊಸ ವರ್ಷದ ಗಿಫ್ಟ್ ನೀಡಲಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್ ) ಯೋಜನೆಯಡಿ ಫಲಾನುಭವಿ ರೈತರಿಗೆ ಪ್ರಧಾನಿ ನರೇಂದ್ರ ಮೋದಿ ನಾಳೆ 10ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದಾರೆ.
ನಾಳೆ ಮಧ್ಯಾಹ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 10 ಕಂತನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ.
ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ದೇಶಾದ್ಯಂತ ರೈತರು ವರ್ಷಕ್ಕೆ ರೂ.6000 ಪಡೆಯುತ್ತಾರೆ. ದೇಶದಲ್ಲಿನ 10 ಕೋಟಿ ಗೂ ಹೆಚ್ಚಿನ ರೈತರ ಕುಟುಂಬಗಳಿಗೆ ಸುಮಾರು 20,000 ಸಾವಿರ ಕೋಟಿ ರೂಪಾಯಿಯನ್ನು ನಾಳೆ ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಲಿದ್ದಾರೆ ಎಂದು ಪಿಎಂಒ ಕಚೇರಿ ಮಾಹಿತಿ ನೀಡಿದೆ.