ನವದೆಹಲಿ: 12 ಸಂಸದರನ್ನು ಸದನದದಿಂದ ಅಮಾನತು ಮಾಡಿರುವುದನ್ನು ರದ್ದುಪಡಿಸಬೇಕೆಂದು ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಎರಡನೇ ಬಾರಿಗೆ ಮಧ್ಯಾಹ್ನ 2 ಗಂಟೆಯವರೆಗೆ ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೂ ಮುಂದೂಡಲಾಗಿದೆ.
ಸದನ ಸಮಾವೇಶಗೊಳ್ಳುತ್ತಿದ್ದಂತೆ ಪ್ರತಿಪಕ್ಷಗಳಾದ ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಟಿಆರ್ ಎಸ್, ಆಮ್ ಆದ್ಮಿ ಪಾರ್ಟಿ ಮತ್ತು ಎಡಪಕ್ಷಗಳು ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಮುಂದುವರಿಸಿದ್ದರಿಂದ ಮಧ್ಯಾಹ್ನದವರೆಗೂ ಕಲಾಪವನ್ನು ಮುಂದೂಡಲಾಯಿತು.
ಸದನದ ಬಾವಿಗಿಳಿದ ಅನೇಕ ಪ್ರತಿಪಕ್ಷಗಳ ಸದಸ್ಯರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದ ಪ್ರತಿಭಟಿಸಿದರು. ಪ್ರಜಾಪ್ರಭುತ್ವ ಹತ್ಯೆ ಮಾಡಬೇಡಿ, ಸರ್ವಾಧಿಕಾರತ್ವ ಪ್ರಜಾಪ್ರಭುತ್ವದಲ್ಲಿ ನಡೆಯುವುದಿಲ್ಲ ಎಂಬಂತಹ ಭಿತ್ತಿಪತ್ರ ಪ್ರದರ್ಶಿಸಿದರು.
ಈ ಮಧ್ಯೆ ಪ್ರಶ್ನೋತ್ತರ ಕಲಾಪ ಆರಂಭಿಸಿದ ರಾಜ್ಯಸಭೆ ಉಪ ಸಭಾಪತಿ ಹರಿವಂಶ್ ನಾರಾಯಣ್ ಸಿಂಗ್ , ಸದಸ್ಯರನ್ನು ತಮ್ಮ ಸ್ಥಾನಗಳಿಗೆ ತೆರಳಿ, ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು. ಆದರೆ, ಪ್ರತಿಪಕ್ಷಗಳ ಸದಸ್ಯರು ಕಿವಿಗೂಡದೇ ಗದ್ದಲ, ಗೊಂದಲ ಮುಂದುವರೆದ್ದರಿಂದ ಸದನವನ್ನು ಮಧ್ಯಾಹ್ನ 2 ಗಂಟೆಯವರೆಗೂ ರಾಜ್ಯಸಭೆ ಉಪಸಭಾಪತಿ ಮುಂದೂಡಿದರು.