ನವದೆಹಲಿ: ರಾಜ್ಯಸಭೆಯ ವಿರೋಧ ಪಕ್ಷಗಳ 12 ಸದಸ್ಯರ ಅಮಾನತನ್ನು ಖಂಡಿಸಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಪ್ರತಿಭಟನೆ ನಡೆಸಿದ್ದು, ಸಭಾಪತಿ ವೆಂಕಯ್ಯ ನಾಯ್ಡು ಸದನವನ್ನು ಮಧ್ಯಾಹ್ನಕ್ಕೆ ಮುಂದೂಡಿದರು. ಅಮಾನತು ಆದೇಶ ರದ್ದು ಮಾಡುವವರೆಗೂ ಪ್ರತಿಭಟನೆ ನಡೆಸಲು ವಿಪಕ್ಷಗಳು ನಿರ್ಧರಿಸಿವೆ.

ವಿಪಕ್ಷಗಳ ಧೋರಣೆಯನ್ನು ಖಂಡಿಸಿರುವ ಸಭಾಪತಿ ವೆಂಕಯ್ಯ ನಾಯ್ಡು, ಇದು ಅಸಂಸದೀಯ ನಡವಳಿಕೆ, ಸಂಸತ್ತಿನ ಅಧಿವೇಶನಕ್ಕಾಗಿ ಕೋಟ್ಯಂತರ ರೂಪಾಯಿ ಹಣವನ್ನು ಖರ್ಚು ಮಾಡಲಾಗುತ್ತಿದೆ. ಸದನಗಳ ಕಾರ್ಯವೈಖರಿ ನೋಡಿ ಜನ ಕಂಗಾಲಾಗಿದ್ದಾರೆ. ಇದು ಸದನಕ್ಕೆ ಅಗೌರವ ತರುವ ನಡವಳಿಕೆ ಎಂದಿದ್ದಾರೆ.
ರಾಜ್ಯಸಭೆಯ 12 ಸದಸ್ಯರ ಅಮಾನತು ಆದೇಶ ಹಿಂಪಡೆಯಬೇಕೆಂಬುದು ನಮ್ಮ ಒತ್ತಾಯವಾಗಿದ್ದು, ಸಭೆ ನಡೆಸಿ ಮುಂದಿನ ನಡೆ ನಿರ್ಧರಿಸುತ್ತೇವೆ. ಅಮಾನತು ಆದೇಶ ತಾಂತ್ರಿಕವಾಗಿ ಕಾನೂನುಬದ್ಧವಾಗಿಲ್ಲ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಈ ಮಧ್ಯೆ ಅಮಾನತುಗೊಂಡಿರುವ ರಾಜ್ಯಸಬಾ ಸಂಸದರು ಸಂಸತ್ ಭವನದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.