ನವದೆಹಲಿ: ಸೇನಾ ಪಡೆಗಳ ಜಂಟಿ ಮುಖ್ಯಸ್ಥ ಬಿಪಿನ್ ರಾವತ್ ಅವರಿದ್ದ ಹೆಲಿಕಾಪ್ಟರ್ ಅಪಘಾತದ ವಿವರಗಳನ್ನು ಕೇಂದ್ರ ಸರ್ಕಾರ ಗುರುವಾರ ವಿವರಿಸುವ ನಿರೀಕ್ಷೆಯಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಸಂಸತ್ತಿನಲ್ಲಿ ಹೇಳಿಕೆ ನೀಡುವ ನಿರೀಕ್ಷೆಯಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಹೆಲಿಕಾಪ್ಟರ್‌ನಲ್ಲಿ 14 ಮಂದಿ ಇದ್ದರು. ಈ ಪೈಕಿ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕೃತವಾಗಿ ದೃಢಪಡಿಸಲಾಗಿದೆ. ತಮಿಳುನಾಡು ಸರ್ಕಾರವು 14 ರಲ್ಲಿ 13 ಸಾವುಗಳನ್ನು ವರದಿ ಮಾಡಿದೆ.
ಆದರೆ, ಸಿ.ಡಿ.ಎಸ್ ಬಿಪಿನ್ ರಾವತ್ ಅವರ ಆರೋಗ್ಯ ಸ್ಥಿತಿ ಕುರಿತು ಯಾವುದೇ ಅಧಿಕೃತ ವರದಿಗಳಿಲ್ಲ. ಡಿಎನ್ಎ ಪರೀಕ್ಷೆ ನಡೆಸಿ ಮೃತದೇಹಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ ಎಂದು ವರದಿಯಾಗಿದೆ. ನಾಳೆ ಸಂಸತ್ತಿನಲ್ಲಿ ರಾಜನಾಥ್ ಸಿಂಗ್ ಅವರು ವಿಷಯಗಳನ್ನು ಪ್ರಸ್ತಾಪಿಸುವ ಸಾಧ್ಯತೆ ಇದೆ. ಬಿಪಿನ್ ರಾವತ್ ಪತ್ನಿ ಮಧುಲಿಕಾ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ
ಅಪಘಾತದ ಬಳಿಕ ರಾಜನಾಥ್ ಸಿಂಗ್ ಬಿಪಿನ್ ರಾವತ್ ನಿವಾಸಕ್ಕೆ ಭೇಟಿ ನೀಡಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡುವಂತೆ ರಾಜನಾಥ್ ಸಿಂಗ್ ಅವರು ವಾಯುಪಡೆಯ ಇತರ ಮುಖ್ಯಸ್ಥರಿಗೆ ಸೂಚಿಸಿದ್ದಾರೆ. ಇದೇ ವೇಳೆ ಸೇನಾ ಮುಖ್ಯಸ್ಥ ಎಂ.ಎಂ. ನರವಣೆ ಅವರು ರಕ್ಷಣಾ ಸಚಿವರಿಗೆ ಅಪಘಾತದ ಬಗ್ಗೆ ವಿವರಿಸಿದರು. ಸೇನಾ ಮುಖ್ಯಸ್ಥರು ಬಿಪಿನ್ ರಾವತ್ ಅವರ ಮನೆಗೆ ಭೇಟಿ ನೀಡಿದ್ದಾರೆ. ಮನೆಯಲ್ಲಿ ಅವರ ಮಗಳು ಮಾತ್ರ ಇದ್ದಾರೆ ಎಂದು ತಿಳಿದು ಬಂದಿದೆ.