ನವದೆಹಲಿ: ದೇಶದಲ್ಲಿ ಟೊಮೆಟೊ ಬೆಲೆ ಗಗನಕ್ಕೇರುತ್ತಿರುವುದು ಎಲ್ಲರಿಗೂ ತಿಳಿದೇ ಇರುತ್ತದೆ. ದಕ್ಷಿಣಭಾರತದ ಹಲವು ರಾಜ್ಯಗಳಲ್ಲಿ ಟೊಮೆಟೊ ಬೆಲೆ ಪ್ರತಿ ಕೆ.ಜಿ.ಗೆ 140 ರೂ.ಗಳಿಗೆ ಮಾರಾಟವಾಗುತ್ತಿದೆ.
ನವದೆಹಲಿ: ದೇಶದಲ್ಲಿ ಟೊಮೆಟೊ ಬೆಲೆ ಗಗನಕ್ಕೇರುತ್ತಿರುವುದು ಎಲ್ಲರಿಗೂ ತಿಳಿದೇ ಇರುತ್ತದೆ. ದಕ್ಷಿಣಭಾರತದ ಹಲವು ರಾಜ್ಯಗಳಲ್ಲಿ ಟೊಮೆಟೊ ಬೆಲೆ ಪ್ರತಿ ಕೆ.ಜಿ.ಗೆ 140 ರೂ.ಗಳಿಗೆ ಮಾರಾಟವಾಗುತ್ತಿದೆ.
ಸೆಪ್ಟೆಂಬರ್ ಅಂತ್ಯದಿಂದಲೂ ಟೊಮೆಟೊ ಬೆಲೆ ಏರಿಕೆಯತ್ತ ಮುಖ ಮಾಡಿತ್ತು.
ಪೂರ್ವದಲ್ಲಿ 30- 80 ರೂ.ಗಳಿಗೆ ಮಾರಾಟವಾಗುತ್ತಿದೆ ಅಂಡಮಾನ್ ನಿಕೋಬಾರ್ ನ ಮಾಯಾಬಂದರಿನಲ್ಲಿ ಟೊಮೆಟೊ ಬೆಲೆ 140 ರೂ.ಗಳಿಗೆ ಮಾರಾಟವಾಗುತ್ತಿದ್ದರೆ, ಕೇರಳದ ತಿರುವನಂತಪುರದಲ್ಲಿ ಕೆ.ಜಿಗೆ 125 ರೂ.ಗಳಿಗೆ ಮಾರಾಟವಾಗುತ್ತಿದೆ.
ಕರ್ನಾಟಕ ರಾಜ್ಯದಲ್ಲಿ ಮಂಗಳೂರು ಮತ್ತು ತುಮಕೂರಿನಲ್ಲಿ ಟೊಮೆಟೊ ಪ್ರತಿ ಕೆ.ಜಿ.ಗೆ 100 ರೂ. ಆದರೆ ಧಾರವಾಡದಲ್ಲಿ 75 ರೂ., ಮೈಸೂರಿನಲ್ಲಿ 74 ರೂ., ಶಿವಮೊಗ್ಗದಲ್ಲಿ 67 ರೂ., ಬೆಂಗಳೂರಿನಲ್ಲಿ 57 ರೂ.ಗಳಿಗೆ ಮಾರಾಟವಾಗುತ್ತಿದೆ. ತಮಿಳುನಾಡಿನಲ್ಲಿ ಟೊಮೆಟೊ ಬೆಲೆ ಗರಿಷ್ಟ 102 ರೂ. ಬೆಲೆಗೆ ಮಾರಾಟವಾಗುತ್ತಿದೆ.