ಜಮ್ಮು: '2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವುದು ಅಸಾಧ್ಯವೆಂದು' ಆ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದಾರೆ.
ಜಮ್ಮುವಿನ ಪೂಂಚ್‌ನಲ್ಲಿ ಬುಧವಾರ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ್ದ ಅವರು, 'ಸಂವಿಧಾನದ 370ನೇ ವಿಧಿ ಮರುಸ್ಥಾಪಿಸುವ ಆಸೆ ನನಗೂ ಇದೆ.
'ಜಮ್ಮು-ಕಾಶ್ಮೀರದ ಪರಿಸ್ಥಿತಿ ನೋಡಿದರೆ ಸಂಸತ್ ಚುನಾವಣೆಯಲ್ಲಿ ನಾವು ಗೆಲ್ಲಬೇಕು ಎಂದು ದೇವರಿಗೂ ಎನಿಸುತ್ತದೆ. ಆದರೆ, ನನಗೇನೂ ಹಾಗೇ ತೋರುತ್ತಿಲ್ಲ. ನಾವು 300 ಸ್ಥಾನಗಳನ್ನು ಪಡೆಯುವುದು ಅಸಾಧ್ಯ. ಹೀಗಾಗಿ ನಾನು ಇಲ್ಲಿನ ಜನರಿಗೆ ಹುಸಿ ಭರವಸೆಗಳನ್ನು ನೀಡುವುದಿಲ್ಲ' ಎಂದಿದ್ದಾರೆ.
ಜಮ್ಮು-ಕಾಶ್ಮೀರಕ್ಕೆ ಪ್ರತ್ಯೇಕ ಸ್ಥಾನಮಾನ ನೀಡುವ 370 ನೇ ವಿಧಿಯನ್ನು ಕೇಂದ್ರದ ಬಿಜೆಪಿ ಸರ್ಕಾರ 2019 ರಲ್ಲಿ ರದ್ದುಗೊಳಿಸಿತ್ತು. ಜಮ್ಮು-ಕಾಶ್ಮೀರ ದೇಶದ ಇತರ ರಾಜ್ಯಗಳಂತೆ ಅದೂ ಒಂದು ಎಂದು, ಅಲ್ಲಿನ ಲಡಾಕ್‌ನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು.
ಕಾಂಗ್ರೆಸ್ ಪಕ್ಷ 370 ನೇ ವಿಧಿಯನ್ನು ಮರುಸ್ಥಾಪಿಸುವ ಒತ್ತಾಯದ ಬಗ್ಗೆ ಮೌನ ವಹಿಸಿರುವುದು ಸರಿಯಲ್ಲ ಎಂದು ಇತ್ತೀಚೆಗೆ ಗುಲಾಂ ನಬಿ ಆಜಾದ್ ಟೀಕಿಸಿದ್ದರು.