ತಿರುವನಂತಪುರಂ: ರಾಜ್ಯದಲ್ಲಿ ಇಂದು 2407 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ತಿರುವನಂತಪುರ 505, ಎರ್ನಾಕುಳಂ 424, ಕೋಝಿಕ್ಕೋಡ್ 227, ಕೊಟ್ಟಾಯಂ 177, ತ್ರಿಶೂರ್ 159, ಕೊಲ್ಲಂ 154, ಕಣ್ಣೂರು 145, ಪತ್ತನಂತಿಟ್ಟ 128, ಮಲಪ್ಪುರಂ 106, ಆಲಪ್ಪುಳ 93, ವಯನಾಡ್ 77, ಪಾಲಕ್ಕಾಡ್ 67, ಕಾಸರಗೋಡು 52, ಇಡುಕ್ಕಿ 43 ಎಂಬಂತೆ ಸೋಂಕು ಬಾಧಿಸಿದೆ. ಕಳೆದ 24 ಗಂಟೆಗಳಲ್ಲಿ 44,754 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ಸಾಪ್ತಾಹಿಕ ಸೋಂಕಿನ ಜನಸಂಖ್ಯೆಯ ಅನುಪಾತವು (WIPR) 10 ಕ್ಕಿಂತ ಹೆಚ್ಚಿನ 5 ಸ್ಥಳೀಯಾಡಳಿತ ಪ್ರದೇಶಗಳಲ್ಲಿ 6 ವಾರ್ಡ್‌ಗಳಿವೆ. ಇಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಇರಲಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 1,24,904 ಮಂದಿ ಜನರು ಕಣ್ಗಾವಲಿನಲ್ಲಿದ್ದಾರೆ. ಇವರಲ್ಲಿ 1,21,046 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದಾರೆ ಮತ್ತು 3,858 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ. ಒಟ್ಟು 163 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ, 24,501 ಕೊರೋನಾ ಪ್ರಕರಣಗಳಲ್ಲಿ, ಕೇವಲ 9.3 ಶೇಕಡ ಜನರು ಮಾತ್ರ ಆಸ್ಪತ್ರೆಗಳು / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್ ಬಾಧಿಸಿ 11 ಮೃತರಾಗಿದ್ದಾರೆ. ಇದಲ್ಲದೆ, ಸುಪ್ರೀಂ ಕೋರ್ಟ್‌ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ 104 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 46,318ಕ್ಕೆ ಏರಿಕೆಯಾಗಿದೆ.
ಇಂದು ಸೋಂಕು ಪತ್ತೆಯಾದವರಲ್ಲಿ 21 ಮಂದಿ ಹೊರ ರಾಜ್ಯದವರು. 2253 ಮಂದಿ ಜನರು ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. 116 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಇಂದು ಹದಿನೇಳು ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಬಾಧಿಸಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ 3377 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 792, ಕೊಲ್ಲಂ 184, ಪತ್ತನಂತಿಟ್ಟ 170, ಆಲಪ್ಪುಳ 68, ಕೊಟ್ಟಾಯಂ 260, ಇಡುಕ್ಕಿ 142, ಎರ್ನಾಕುಳಂ 662, ತ್ರಿಶೂರ್ 183, ಪಾಲಕ್ಕಾಡ್ 48, ಮಲಪ್ಪುರಂ 117, ಕೋಝಿಕ್ಕೋಡ್ 370, ವಯನಾಡ್ 96, ಕಣ್ಣೂರು 227, ಕಾಸರಗೋಡು 58 ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ 24,501 ಮಂದಿಗೆ ಸೋಂಕು ದೃಢಪಟ್ಟಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 51,61,800 ಮಂದಿ ಜನರು ಕೊರೋನಾದಿಂದ ಮುಕ್ತರಾಗಿದ್ದಾರೆ.