ತಿರುವನಂತಪುರ: ರಾಜ್ಯದಲ್ಲಿ ಇಂದು 2423 ಮಂದಿಗೆ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಎರ್ನಾಕುಳಂ 455, ತಿರುವನಂತಪುರ 416, ಕೋಝಿಕ್ಕೋಡ್ 266, ಕೊಟ್ಟಾಯಂ 195, ತ್ರಿಶೂರ್ 192, ಕಣ್ಣೂರು 152, ಪತ್ತನಂತಿಟ್ಟ 150, ಕೊಲ್ಲಂ 149, ಆಲಪ್ಪುಳ 99, ಮಲಪ್ಪುರಂ 98, ಇಡುಕ್ಕಿ 88, ವಯನಾಡ್ 67, ಪಾಲಕ್ಕಾಡ್ 64, ಕಾಸರಗೋಡು 32 ಎಂಬಂತೆ ಸೋಂಕು ದೃಢಪಡಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ 58,459 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸಾಪ್ತಾಹಿಕ ಸೋಂಕಿನ ಜನಸಂಖ್ಯೆಯ ಅನುಪಾತ 10 ಕ್ಕಿಂತ ಹೆಚ್ಚಿನ 5 ಸ್ಥಳೀಯಾಡಳಿತ ಪ್ರದೇಶಗಳಲ್ಲಿ 6 ವಾರ್ಡ್ಗಳಿವೆ. ಇಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಇರಲಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 1,10,680 ಮಂದಿ ಜನರು ನಿಗಾದಲ್ಲಿದ್ದಾರೆ. ಇವರಲ್ಲಿ 1,07,074 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದಾರೆ ಮತ್ತು 3606 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ. ಒಟ್ಟು 172 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಸ್ತುತ, 19,835 ಕೊರೋನಾ ಪ್ರಕರಣಗಳಲ್ಲಿ, ಕೇವಲ 10.5 ಪ್ರತಿಶತ ಜನರು ಆಸ್ಪತ್ರೆ ಮತ್ತು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್ ಬಾಧಿಸಿ 15 ಮಂದಿ ಮೃತರಾಗಿದ್ದಾರೆ. ಇದಲ್ಲದೆ, ಸುಪ್ರೀಂ ಕೋರ್ಟ್ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ 149 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 47,441ಕ್ಕೆ ಏರಿಕೆಯಾಗಿದೆ. ಇಂದು ಸೋಂಕು ಪತ್ತೆಯಾದವರಲ್ಲಿ 27 ಮಂದಿ ಹೊರ ರಾಜ್ಯದವರು. 2262 ಮಂದಿ ಜನರು ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. 108 ಮಂದಿ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. 26 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ದೃಢಪಡಿಸಲಾಗಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ 2879 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 484, ಕೊಲ್ಲಂ 420, ಪತ್ತನಂತಿಟ್ಟ 119, ಆಲಪ್ಪುಳ 87, ಕೊಟ್ಟಾಯಂ 183, ಇಡುಕ್ಕಿ 87, ಎರ್ನಾಕುಳಂ 567, ತ್ರಿಶೂರ್ 171, ಪಾಲಕ್ಕಾಡ್ 111, ಮಲಪ್ಪುರಂ 110, ಕೋಝಿಕ್ಕೋಡ್ 258, ವಯನಾಡ್ 64,ಕಣ್ಣೂರು 176, ಕಾಸರಗೋಡು 42 ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ 19,835 ಮಂದಿ ಜನರಿಗೆ ರೋಗ ಪತ್ತೆಯಾಗಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 51,76,535 ಮಂದಿ ಕೊರೊನಾದಿಂದ ಮುಕ್ತರಾಗಿದ್ದಾರೆ.