ನವದೆಹಲಿ: ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಿಳಿಸಿರುವಂತೆ, ಕೋವಿಡ್ ಲಸಿಕೆ ಕೋವಿಶೀಲ್ಡ್‌ನ ಪ್ರಸ್ತುತ ಮಾಸಿಕ ಉತ್ಪಾದನಾ ಸಾಮರ್ಥ್ಯ 250-275 ಮಿಲಿಯನ್ ಡೋಸ್ ಆಗಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಗೆ ತಿಳಿಸಿದೆ.
ಇದಲ್ಲದೆ, ಹೈದರಾಬಾದ್‌ನ ಭಾರತ್ ಬಯೋಟೆಕ್ ಇಂಟರ್‌ನ್ಯಾಶನಲ್ ಲಿಮಿಟೆಡ್ ತಿಳಿಸಿರುವಂತೆ, ಪ್ರಸ್ತುತ ಮಾಸಿಕ ಕೋವಾಕ್ಸಿನ್ ಉತ್ಪಾದನಾ ಸಾಮರ್ಥ್ಯವು 50-60 ಮಿಲಿಯನ್ ಡೋಸ್ ಆಗಿದೆ ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಭಾರತಿ ಪ್ರವೀಣ್ ಪವಾರ್ ಅವರು ಇಂದು ಲೊಕಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.
ಈ ಎರಡು ಅನುಮೋದಿತ ಕೋವಿಡ್ ಲಸಿಕೆ ತಯಾರಕರು ಗರಿಷ್ಠ ಉತ್ಪಾದನಾ ಸಾಮರ್ಥ್ಯವನ್ನು ಸಾಧಿಸಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪವಾರ್, "ಎರಡೂ ಕಂಪನಿಗಳು ಪ್ರಸ್ತುತ ಉತ್ಪಾದನಾ ಸಾಮರ್ಥ್ಯದ ಶೇ. 90 ರಷ್ಟು ಸಾಧಿಸಿವೆ" ಎಂದು ಹೇಳಿದರು.