ಲಖನೌ: ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು (ಬಿಜೆಪಿ) 300ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಭವಿಷ್ಯ ನುಡಿದಿದ್ದಾರೆ.
ಲಖನೌ: ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು (ಬಿಜೆಪಿ) 300ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಭವಿಷ್ಯ ನುಡಿದಿದ್ದಾರೆ.
ಉತ್ತರ ಪ್ರದೇಶದ ಜಲಗಾಂವ್‌ನಲ್ಲಿ ಪಕ್ಷ ಆಯೋಜಿಸಿರುವ 'ಜನ ವಿಶ್ವಾಸ ಯಾತ್ರೆ'ಯಲ್ಲಿ ಭಾಗವಹಿಸಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಾಯಕತ್ವದಲ್ಲಿ 'ಸಬ್ ಕಾ ಸಾಥ್, ಸಬ್ ಕಾ ವಿಕಾಸ್' ಸಂಕಲ್ಪವನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆ.
ಹಿಂದೆ ಪೋಷಕರು ಹೆಣ್ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂಜರಿಯುತ್ತಿದ್ದರು. ಆದರೆ ಕಳೆದ 4.5 ವರ್ಷಗಳಲ್ಲಿ ಎಲ್ಲ ಗೂಂಡಾಗಳು ಉತ್ತರ ಪ್ರದೇಶದಿಂದ ಪಲಾಯನ ಮಾಡಿದ್ದಾರೆ ಎಂದು ಹೇಳಿದರು.
ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜ ಪಕ್ಷದ ಅಧಿಕಾರವಧಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು. ಆದರೆ ಈಗ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿದೆ ಎಂದು ಹೇಳಿದ್ದಾರೆ.
ಸಮಾಜವಾದಿ ಪಕ್ಷವು ಮತ್ತೆ ಅಧಿಕಾರಕ್ಕೇರುವ ಕನಸು ಕಾಣುತ್ತಿದ್ದು, ರಾಮಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣವನ್ನು ತಡೆಗಟ್ಟುವ ಹುನ್ನಾರ ಹೊಂದಿದೆ. ಅಖಿಲೇಶ್ ಅವರೇ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವನ್ನು ತಡೆಗಟ್ಟಲು ಯಾರಿಂದಲೂ ಸಾಧ್ಯವಿಲ್ಲ ಎಂದು ಎಚ್ಚರಿಸಿದರು.