ನವದೆಹಲಿ: ಜಗತ್ತಿನಾದ್ಯಂದ ಆತಂಕ ಸೃಷ್ಟಿಸಿರುವ ಒಮಿಕ್ರಾನ್, ಇದೀಗ ಮತ್ತೆ 30 ದೇಶಗಳಿಗೆ ವ್ಯಾಪಿಸುವ ಮೂಲಕ ಸೋಂಕಿನ ಭೀತಿಯನ್ನು ಹೆಚ್ಚಿಸಿದೆ. ಮಾತ್ರವಲ್ಲ, ಸೋಂಕಿನ ಪ್ರಮಾಣ 3 ದಿನಗಳಿಗೆ ದುಪ್ಪಟ್ಟಾಗುತ್ತಿದೆ ಎಂಬ ಮಾಹಿತಿಯೂ ಬಹಿರಂಗಗೊಂಡಿದೆ.
ನವದೆಹಲಿ: ಜಗತ್ತಿನಾದ್ಯಂದ ಆತಂಕ ಸೃಷ್ಟಿಸಿರುವ ಒಮಿಕ್ರಾನ್, ಇದೀಗ ಮತ್ತೆ 30 ದೇಶಗಳಿಗೆ ವ್ಯಾಪಿಸುವ ಮೂಲಕ ಸೋಂಕಿನ ಭೀತಿಯನ್ನು ಹೆಚ್ಚಿಸಿದೆ. ಮಾತ್ರವಲ್ಲ, ಸೋಂಕಿನ ಪ್ರಮಾಣ 3 ದಿನಗಳಿಗೆ ದುಪ್ಪಟ್ಟಾಗುತ್ತಿದೆ ಎಂಬ ಮಾಹಿತಿಯೂ ಬಹಿರಂಗಗೊಂಡಿದೆ.
ಕರೊನಾದ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಕುರಿತ ಈ ಅಂಶಗಳನ್ನು ವಿಶ್ವ ಆರೋಗ್ಯ ಸಂಸ್ಥೆಯೇ ಬಹಿರಂಗಗೊಳಿಸಿದೆ. ಡಿ. 10ರಂದು ಜಗತ್ತಿನ 59 ದೇಶಗಳಲ್ಲಿ ಒಮಿಕ್ರಾನ್ ಕಾಣಿಸಿಕೊಂಡಿದೆ ಎಂಬ ಮಾಹಿತಿ ಹೊರಬಿದ್ದಿತ್ತು. ಆದರೆ ಇದೀಗ ಒಮಿಕ್ರಾನ್ ಜಗತ್ತಿನ ಇನ್ನೂ 30 ರಾಷ್ಟ್ರಗಳಲ್ಲಿ ಹಬ್ಬಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಡಿ. 16ರ ಮಾಹಿತಿ ಪ್ರಕಾರ 89 ದೇಶಗಳಲ್ಲಿ ಒಮಿಕ್ರಾನ್ ಕಾಣಿಸಿಕೊಂಡಿದ್ದು, ಶೀಘ್ರದಲ್ಲೇ ಅದು ಡೆಲ್ಟಾ ವೇರಿಯಂಟ್ ಪ್ರಕರಣಗಳಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳಲಿದೆ. ಒಮಿಕ್ರಾನ್ ಎಷ್ಟು ವೇಗವಾಗಿ ಹರಡುತ್ತಿದೆ ಎಂದರೆ ಒಂದೂವರೆಯಿಂದ 3 ದಿನಗಳಲ್ಲಿ ಸೋಂಕಿನ ಪ್ರಮಾಣ ದುಪ್ಪಟ್ಟಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.