ತಿರುವನಂತಪುರ: ಕೇರಳದಲ್ಲಿ ಇಂದು 3471 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎರ್ನಾಕುಳಂ 680, ತಿರುವನಂತಪುರ 563, ಕೋಝಿಕ್ಕೋಡ್ 354, ತ್ರಿಶೂರ್ 263, ಕೊಟ್ಟಾಯಂ 262, ಕೊಲ್ಲಂ 255, ಕಣ್ಣೂರು 228, ಪತ್ತನಂತಿಟ್ಟ 182, ಮಲಪ್ಪುರಂ 166, ಅಲಪ್ಪುಳ 164, ಇಡುಕ್ಕಿ 115, ಪಾಲಕ್ಕಾಡ್ 92, ವಯನಾಡ್ 90, ಕಾಸರಗೋಡು 57 ಎಂಬಂತೆ ಸೋಂಕು ದೃಢಪಡಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ 54,715 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸಾಪ್ತಾಹಿಕ ಸೋಂಕಿನ ಜನಸಂಖ್ಯೆಯ ಅನುಪಾತ 10 ಕ್ಕಿಂತ ಹೆಚ್ಚಿನ 5 ಸ್ಥಳೀಯಾಡಳಿತ ಪ್ರದೇಶಗಳಲ್ಲಿ 6 ವಾರ್ಡ್ಗಳಿವೆ. ಇಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಇರಲಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 1,43,337 ಮಂದಿ ಜನರು ನಿಗಾದಲ್ಲಿದ್ದಾರೆ. ಇವರಲ್ಲಿ 1,39,318 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದಾರೆ ಮತ್ತು 4,019 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ. ಒಟ್ಟು 168 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ, 32,433 ಕೊರೋನಾ ಪ್ರಕರಣಗಳಲ್ಲಿ, ಕೇವಲ 8.2 ಪ್ರತಿಶತದಷ್ಟು ಆಸ್ಪತ್ರೆಗಳು / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 22 ಮಂದಿ ಕೋವಿಡ್ ಬಾಧಿತರು ಮೃತರಾಗಿದ್ದಾರೆ. ಇದಲ್ಲದೆ, ಸುಪ್ರೀಂ ಕೋರ್ಟ್ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರ ಮೇಲ್ಮನವಿ ಸಲ್ಲಿಸಿದ 221 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 44,189ಕ್ಕೆ ಏರಿಕೆಯಾಗಿದೆ.
ಇಂದು ಸೋಂಕು ಪತ್ತೆಯಾದವರಲ್ಲಿ 18 ಮಂದಿ ಹೊರ ರಾಜ್ಯದವರು. ಸಂಪರ್ಕದ ಮೂಲಕ 3250 ಮಂದಿ ಜನರು ಸೋಂಕಿಗೆ ಒಳಗಾಗಿದ್ದಾರೆ. 183 ಮಂದಿ ಜನರ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಇಪ್ಪತ್ತು ಮಂದಿ ಆರೋಗ್ಯ ಕಾರ್ಯಕರ್ತರಿಗೂ ಕೋವಿಡ್ ದೃಢಪಟ್ಟಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ 4966 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 859, ಕೊಲ್ಲಂ 535, ಪತ್ತನಂತಿಟ್ಟ 145, ಆಲಪ್ಪುಳ 72, ಕೊಟ್ಟಾಯಂ 561, ಇಡುಕ್ಕಿ 166, ಎರ್ನಾಕುಳಂ 760, ತ್ರಿಶೂರ್ 481, ಪಾಲಕ್ಕಾಡ್ 71, ಮಲಪ್ಪುರಂ 93, ಕೋಝಿಕ್ಕೋಡ್ 728, ವಯನಾಡ್ 103, ಕಣ್ಣೂರು 327 ಮತ್ತು ಕಾಸರಗೋಡು 65 ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ 32,433 ಮಂದಿಗೆ ಸೋಂಕು ದೃಢಪಟ್ಟಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 51,34,010 ಮಂದಿ ಜನರು ಕೊರೋನಾದಿಂದ ಮುಕ್ತರಾಗಿದ್ದಾರೆ.