ತಿರುವನಂತಪುರಂ: ರಾಜ್ಯದಲ್ಲಿ ಇಂದು 3777 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ತಿರುವನಂತಪುರ 808, ಎರ್ನಾಕುಳಂ 590, ಕೋಝಿಕ್ಕೋಡ್ 505, ಕಣ್ಣೂರು 249, ಕೊಟ್ಟಾಯಂ 242, ಕೊಲ್ಲಂ 229, ತ್ರಿಶೂರ್ 224, ಮಲಪ್ಪುರಂ 212, ಇಡುಕ್ಕಿ 182, ಪತ್ತನಂತಿಟ್ಟ 170, ವಯನಾಡ್ 110, ಅಲಪ್ಪುಳ 96, ಕಾಸರಗೋಡು 80, ಪಾಲಕ್ಕಾಡ್ 80 ಎಂಬಂತೆ ಸೋಂಕು ದೃಢಪಡಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ 57,121 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸಾಪ್ತಾಹಿಕ ಸೋಂಕಿನ ಜನಸಂಖ್ಯೆಯ ಅನುಪಾತ (WIPR) 10 ಕ್ಕಿಂತ ಹೆಚ್ಚಿನ 5 ಸ್ಥಳೀಯಾಡಳಿತ ಪ್ರದೇಶಗಳಲ್ಲಿ 6 ವಾರ್ಡ್‌ಗಳಿವೆ. ಇಲ್ಲಿ ಕಟ್ಟುನಿಟ್ಟಿನ ನಿಯಂತ್ರಣವಿರುತ್ತದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 1,61,911 ಮಂದಿ ಜನರು ನಿಗಾದಲ್ಲಿದ್ದಾರೆ. ಇವರಲ್ಲಿ 1,57,577 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದಾರೆ ಮತ್ತು 4334 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ. 196 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಸ್ತುತ, 38,361 ಕೊರೋನಾ ಪ್ರಕರಣಗಳಲ್ಲಿ, ಕೇವಲ 8.1 ಪ್ರತಿಶತದಷ್ಟು ಜನರು ಆಸ್ಪತ್ರೆ / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್ ಬಾಧಿಸಿ 34 ಮಂದಿ ಮೃತರಾಗಿದ್ದಾರೆ. ಇದಲ್ಲದೆ, ಸುಪ್ರೀಂ ಕೋರ್ಟ್‌ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ 109 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 42,967ಕ್ಕೆ ಏರಿಕೆಯಾಗಿದೆ.
ಇಂದು ಸೋಂಕು ಪತ್ತೆಯಾದವರಲ್ಲಿ 11 ಮಂದಿ ಹೊರ ರಾಜ್ಯದವರು. 3572 ಮಂದಿ ಜನರು ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. 171 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಇಂದು 23 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ದೃಢಪಡಿಸಲಾಗಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ 3856 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 359, ಕೊಲ್ಲಂ 179, ಪತ್ತನಂತಿಟ್ಟ 298, ಆಲಪ್ಪುಳ 142, ಕೊಟ್ಟಾಯಂ 375, ಇಡುಕ್ಕಿ 142, ಎರ್ನಾಕುಳಂ 606, ತ್ರಿಶೂರ್ 432, ಪಾಲಕ್ಕಾಡ್ 19, ಮಲಪ್ಪುರಂ 281, ಕೋಝಿಕ್ಕೋಡ್ 492, ವಯನಾಡ್ 403, ಕಣ್ಣೂರು 284, ಕಾಸರಗೋಡು 44 ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ 38,361 ಮಂದಿಗೆ ಸೋಂಕು ಪತ್ತೆಯಾಗಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 51,12,620 ಮಂದಿ ಜನರು ಕೊರೋನಾದಿಂದ ಮುಕ್ತರಾಗಿದ್ದಾರೆ.