ನವದೆಹಲಿ: 'ಡಿಸೆಂಬರ್ 4ರಂದು ಬೆಳಿಗ್ಗೆ ಆಂಧ್ರ ಪ್ರದೇಶ, ಒಡಿಶಾದ ಕರಾವಳಿ ಪ್ರದೇಶ ಹಾಗೂ ಪಶ್ಚಿಮ ಬಂಗಾಳಕ್ಕೆ ಚಂಡಮಾರುತ ಅಪ್ಪಳಿಸಲಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ' ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ತಿಳಿಸಿದೆ.
'ಡಿ.4ರಂದು ಬೆಳಿಗ್ಗೆ ಚಂಡಮಾರುತವು ಉತ್ತರ ಆಂಧ್ರ ಪ್ರದೇಶ ಮತ್ತು ಒಡಿಶಾದ ಕರಾವಳಿ ಪ್ರದೇಶಗಳನ್ನು ತಲುಪಲಿದೆ. ಇದರಿಂದಾಗಿ ಒಡಿಶಾದ ಹಲವೆಡೆ, ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳು, ಆಂಧ್ರಪ್ರದೇಶದ ಉತ್ತರ ಕರಾವಳಿಯ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ' ಎಂದು ಮುನ್ಸೂಚನೆ ನೀಡಿದೆ.
ಡಿ.5 ಮತ್ತು 6ರಂದು ಈಶಾನ್ಯ ರಾಜ್ಯಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಫಸಲು ರಕ್ಷಣೆಗೆ ಸೂಚನೆ
ಮುಂದಿನ ವಾರದಲ್ಲಿ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಒಡಿಶಾ ಸರ್ಕಾರವು ಫಸಲು ರಕ್ಷಣೆ ಆದ್ಯತೆ ನೀಡಿದೆ. ಭತ್ತದ ಕೊಯ್ಲನ್ನು ಕಾಪಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸರ್ಕಾರ ತಿಳಿಸಿದೆ.