ಬೆಂಗಳೂರು: ಕರ್ನಾಟಕದಲ್ಲಿ ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 566 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,05,798ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು 6 ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,324ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇಂದಿನ 29/12/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/3P3NH2Bqtn @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/qCBOKptkZo
— K'taka Health Dept (@DHFWKA) December 29, 2021
ಬೆಂಗಳೂರಿನಲ್ಲಿ ಇಂದು 400 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,62,397ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ನಾಲ್ವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ. ರಾಜ್ಯದಲ್ಲಿ ಇಂದು 245 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,59,674ಕ್ಕೆ ಏರಿಕೆಯಾಗಿದೆ. ಇನ್ನು 7,771 ಸಕ್ರಿಯ ಪ್ರಕರಣಗಳಿವೆ.