ಐಜ್ವಾಲ್: ಮಿಜೋರಾಂನಲ್ಲಿ 44 ಮಕ್ಕಳಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. 44 ಮಕ್ಕಳು ಸೇರಿದಂತೆ 214 ಜನರಿಗೆ ಕೋವಿಡ್ -19 ಸೋಂಕು ಪತ್ತೆಯಾಗುವುದರೊಂದಿಗೆ ಗುರುವಾರ ಒಟ್ಟು ಪ್ರಕರಣಗಳ ಸಂಖ್ಯೆ 1,40,143ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಈಶಾನ್ಯ ರಾಜ್ಯದಲ್ಲಿ ಹೊಸದಾಗಿ ಕೊರೋನಾವೈರಸ್ ಸಾವಿನ ಸಂಖ್ಯೆ ವರದಿಯಾಗಿಲ್ಲ, ಒಟ್ಟಾರೇ ಸಾವಿನ ಸಂಖ್ಯೆ 535 ಆಗಿರುವುದಾಗಿ ಎಂದು ರಾಜ್ಯ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರಡಿಸಿರುವ ಹೇಳಿಕೆಯಲ್ಲಿ ತಿಳಿಸಿದೆ.
ಮಿಜೋರಾಂನಲ್ಲಿ ಸದ್ಯ 1,847 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳಲ್ಲಿ 238 ಸೋಂಕಿತರು ಸೇರಿದಂತೆ ಇಲ್ಲಿಯವರೆಗೂ 1,37,761 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ನವೆಂಬರ್ ನಲ್ಲಿ ಓಮಿಕ್ರಾನ್ ಪತ್ತೆಯಾದ ನಂತರ ವಿವಿಧ ರಾಷ್ಟ್ರಗಳಿಂದ 139 ಜನರು ಮಿಜೋರಾಂಗೆ ಆಗಮಿಸಿರುವುದಾಗಿ ಮತ್ತೊಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.