ಕಾಸರಗೋಡು: ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಕಾಸರಗೋಡು ಇದರ ನೇತೃತ್ವದಲ್ಲಿ ಡಿ.5 ರಂದು ಭಾನುವಾರ ಕಾಸರಗೋಡು ಕ್ಯಾಪಿಟಲ್ ಇನ್ ಸಭಾಂಗಣದಲ್ಲಿ ಬೆಳಿಗ್ಗೆ 9 ರಿಂದ ಗಡಿನಾಡ ಕನ್ನಡ ರಾಜ್ಯೋತ್ಸವ ಹಾಗೂ ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಪೌರ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಸಂಸ್ಥಾಪಕ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭವನ್ನು ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸುವರು. ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳು ಆಶೀರ್ವಚನ ನೀಡುವರು. ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ದ ಅವರಿಗೆ ಸಂಸದ ರಾಜಮೋಹನ ಉಣ್ಣಿತ್ತಾನ್ ಪೌರ ಸನ್ಮಾನ ನೀಡುವರು.ಕರ್ನಾಟಕ ಉಪ್ಪಾರ ಅ|ಭಿವೃದ್ದಿ ನಿಗಮದ ಅಧ್ಯಕ್ಷ ಬಿ.ಕೆ.ಗಿರೀಶ್ ಉಪ್ಪಾರ, ಶಾಸಕ ಎನ್.ಎ.ನೆಲ್ಲಿಕುನ್ನು, ನ್ಯಾಯವಾದಿ ಸಿ.ಎಚ್.ಕುಂಞಂಬು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಬಿಜೆಪಿ ಜಿಲ್ಲಾಧ್ಯಕ್ಷ ರವೀಶ ತಂತ್ರಿ ಕುಂಟಾರು, ಜಿ.ಪಂ.ಉಪಾಧ್ಯಕ್ಷ ಶಹನವಾಸ ಪಾದೂರು, ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗ ಆಯೋಗದ ಸದಸ್ಯ ಕೆ.ಟಿ.ಸುವರ್ಣ, ಕ.ಸಾ.ಪ. ಕರ್ನಾಟಕ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಚುಟುಕು ಸಾಹಿತ್ಯ ಕೇಂದ್ರ ಪರಿಷತ್ತು ಪ್ರಧಾನ ಸಂಚಾಲಕ ಎಂ.ಜಿ.ಆರ್. ಅರಸ್, ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್, ಜಿ.ಪಂ. ಅ|ಧ್ಯಕ್ಷೆ ಬೇಬಿ ಬಾಲಕೃಷ್ಣನ್ ಶುಭಾಶಂಸನೆಗೈಯ್ಯುವರು.
ಈ ಸಂದರ್ಭ ದೈವನರ್ತಕ ಕಲಾವಿದ ಡಾ.ರವೀಶ ಪರವ, ಕನ್ನಡಪರ ಸಂಘಟಕ ಎಸ್.ಎಲ್.ಭಾರಧ್ವಾಜ್ ಬೇಕಲ್ ಅವರನ್ನು ಗೌರವಿಸಲಾಗುವುದು. ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಪ್ರಧಾನ ಕಾರ್ಯದರ್ಶಿ ಅಖಿಲೇಶ್ ನಗುಮುಗಂ ಪ್ರಾಸ್ತಾವಿಕವಾಗಿ ಮಾತನಾಡುವರು. ಅ|ಧ್ಯಕ್ಷ ಚನಿಯಪ್ಪ ನಾಯ್ಕ ಎನ್., ಝಡ್ ಎ.ಕಯ್ಯಾರು, ರವಿ ನಾಯ್ಕಾಪು, ಪ್ರೊ.ಎ.ಶ್ರೀನಾಥ್, ಶ್ರೀಕಾಂತ್ ನೆಟ್ಟಣಿಗೆ, ಅಶ್ವಥ್ ಪೂಜಾರಿ ಲಾಲ್ ಬಾಗ್, ಅಕ್ಷತಾ ರಾಜ್ ಪೆರ್ಲ, ವನಿತಾ ವಾಣಿ ಕ್ರಾಸ್ತ, ಅ|ಶ್ರಫ್ ಬೆದ್ರಂಪಳ್ಳ, ಹರೀಶ್ ಗೋಸಾಡ, ರೇಷ್ಮಾ, ತೇಜಕುಮಾರಿ, ವಸಂತ, ಆಶಾ, ಜಯಲಕ್ಷ್ಮೀ, ಸಂಧ್ಯಾಗೀತ ಬಾಯಾರು ಉಪಸ್ಥಿತರಿರುವರು.