ನವದಹಲಿ: ದೇಶಾದ್ಯಂತ ಓಮಿಕ್ರಾನ್ ರೂಪಾಂತರಿ ಭೀತಿ ಮುಂದುವರೆದಿರುವಂತೆಯೇ ಇತ್ತ ದೇಶದಲ್ಲಿ ಕೋವಿಡ್-19 ಸೋಂಕಿನ ಏರಿಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 8,439 ಹೊಸ ಸೋಂಕು ಪ್ರಕರಣಗಳು, 195 ಸಾವು ವರದಿಯಾಗಿದೆ.
ಈ ಕುರಿತು ಕೇಂದ್ಲ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 8,439 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ. ಅಂತೆಯೇ 195 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೋವಿಡ್ ಗೆ ಬಲಿಯಾದವರ ಸಂಖ್ಯೆ 4,73,952ಕ್ಕೆ ಏರಿಕೆಯಾಗಿದೆ.
ಇದೇ ಸಂದರ್ಭದಲ್ಲಿ ದೇಶಾದ್ಯಂತ 9,525 ಮಂದಿ ಸೋಂಕಿತರು ಗುಣಮುಖರಾಗಿದ್ದು ಆ ಮೂಲಕ ಗುಣಮುಖರ ಸಂಖ್ಯೆ 3,40,89,137ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಪ್ರಸ್ತುತ 93,733 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಅಂತೆಯೇ ದೇಶದಲ್ಲಿನ ಒಟ್ಟಾರೆ ಕೋವಿಡ್ ಲಸಿಕೆಗಳ ಪ್ರಮಾಣ 129.5 ಕೋಟಿ ಡೋಸ್ ಗೆ ಏರಿಕೆಯಾಗಿದೆ.