ನವದೆಹಲಿ:ದೇಶದಲ್ಲಿ ಒಮೈಕ್ರಾನ್ ಸೋಂಕಿನ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ರಾಜ್ಯ ಸರಕಾರಗಳು ಈ ಬಾರಿ ಹೊಸ ವರ್ಷದ ಆಚರಣೆಗೆ ನಿಷೇಧ ವಿಧಿಸಿದೆ. ದಿಲ್ಲಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಗರದಲ್ಲಿ ಈಗಾಗಲೇ ರಾತ್ರಿ 10ರಿಂದ ಬೆಳಗ್ಗೆ 5ರ ವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಕರ್ನಾಟಕದಲ್ಲಿ ಜನವರಿ 7ರ ವರೆಗೆ 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆ ವರೆಗೆ ರಾತ್ರಿ ಕರ್ಫ್ಯೂ ಹೇರಲಾಗಿದೆ.
ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆ ವರೆಗೆ ಐದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ. ತಮಿಳುನಾಡಿನಲ್ಲಿ ಹೊಸ ವರ್ಷದ ಪಾರ್ಟಿಗೆ ನಿಷೇಧ ವಿಧಿಸಲಾಗಿದೆ. ಕೇರಳದಲ್ಲಿ ರಾತ್ರಿ ಹೊರ್ಷ ವರ್ಷ ಆಚರಿಸದಂತೆ ಸೂಚಿಸಲಾಗಿದೆ.
ಒಡಿಸ್ಸಾದಲ್ಲಿ ಹೆಚ್ಚುವರಿಯಾಗಿ ಹೊಸ ವರ್ಷದ ನಿರ್ಬಂಧಗಳನ್ನು ಜಾರಿಗೆ ತಂದಿದೆ. ಇದು ಜನವರಿ 2ರ ವರೆಗೆ ಅಸ್ತಿತ್ವದಲ್ಲಿ ಇರಲಿದೆ. ಗುಜರಾತ್‌ನ ಅಹ್ಮದಾಬಾದ್, ಸೂರತ್, ರಾಜ್ಕೋಟ್, ವಡೋದರಾ, ಜುನಾಗಢ್ , ಭಾವನಗರ ಹಾಗೂ ಗಾಂಧಿನಗರದಲ್ಲಿ ರಾತ್ರಿ ಕರ್ಫ್ಯೂವನ್ನು 2 ಗಂಟೆಗಳ ಕಾಲ ವಿಸ್ತರಿಸಲಾಗಿದೆ. ಗೋವಾದಲ್ಲಿ ರಾತ್ರಿ ಕರ್ಫ್ಯೂ ವಿಧಿಸಿಲ್ಲ. ಆದರೆ, ಹೊಸ ವರ್ಷ ಆಚರಣೆಗೆ ನಿಷೇಧ ವಿಧಿಸಿದೆ.