ಗೋದಾವರಿ: ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಪ್ರಯಾಣಿಸುತ್ತಿದ್ದ ಬಸ್ಸು ಜಲ್ಲೇರು ವಾಗು ಎಂಬಲ್ಲಿ ಮೋರಿಯಿಂದ ಹೊಳೆಗೆ ಉರುಳಿ ಬಿದ್ದು ಚಾಲಕ ಸಹಿತ ಕನಿಷ್ಠ 9 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದುರ್ಘಟನೆ ಬುಧವಾರ ನಡೆದಿದೆ.
ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ. ಆಂಧ್ರ ಪ್ರದೇಶ ಸಾರಿಗೆ ಬಸ್ಸು ನೀರಿಗೆ ಉರುಳಿ ಬಿದ್ದಿದೆ. ಬಸ್ಸಿನಲ್ಲಿ 47 ಮಂದಿ ಪ್ರಯಾಣಿಸುತ್ತಿದ್ದರು.