ಕಾಸರಗೋಡು: ಉನ್ನತ ಶಿಕ್ಷಣ ಕೇಂದ್ರ ಸೇರಿದಂತೆ ಪಿಎಸ್‍ಸಿಯ ವಲಯಗಳಲ್ಲಿ ಆಡಳಿತಾರೂಢ ಸಿಪಿಎಂ ಪಾರುಪತ್ಯ ಸ್ಥಾಪಿಸಲು ಯತ್ನಿಸುತ್ತಿದ್ದು, ಇದು ರಾಜ್ಯದ ಅಭಿವೃದ್ಧಿಗೆ ಮಾರಕವಾಗಲಿರುವುದಾಗಿ ಬಿಜೆಪಿ ರಾಜ್ಯ ಸಮಿತಿ ಉಪಾಧ್ಯಕ್ಷ ವಿ.ಎನ್ ರಾಧಾಕೃಷ್ಣನ್ ತಿಳಿಸಿದ್ದಾರೆ.
ಅವರು ಬಿಜೆಪಿಯ ಹಿರಿಯ ಮುಖಂಡ, ಸ್ವರ್ಗೀಯ ಮಡಿಕೈ ಕಮ್ಮಾರನ್ ಅವರ ಸ್ಮøತಿಮಂಟಪದಲ್ಲಿ ನಡೆದ ಸಂಸ್ಮರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಬಿಜೆಪಿ ರಾಜ್ಯ ಸಮಿತಿ ಸದಸ್ಯ ಇ. ಕೃಷ್ಣನ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಮಿತಿ ಅಧ್ಯಕ್ಷ ರವೀಶ ತಂತ್ರಿ ಕುಂಟಾರ್, ಉಪಾಧ್ಯಕ್ಷ ಬಲ್‍ರಾಜ್, ಜಿಲ್ಲಾ ಕಾರ್ಯದರ್ಶಿ ಮನುಲಾಲ್ ಮೇಲತ್, ಮಂಡಲ ಸಮಿತಿ ಅಧ್ಯಕ್ಷ ಪ್ರಶಾಂತ್, ಕೆ.ಕೆ ರಾಜಗೋಪಾಲ್, ಪಿ.ದಾಮೋದರ ಪಣಿಕ್ಕರ್ ಉಪಸ್ಥಿತರಿದ್ದರು. ಈ ಸಂದರ್ಭ ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಮೂರೂ ಸೇನಾಪಡೆಗಳ ಮಹಾದಂಡನಾಯಕ ಬಿಪಿನ್ ರಾವತ್, ಅವರ ಪತ್ನಿ ಹಾಗೂ ಇತರ ಧೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.