ನವದೆಹಲಿ: ಕೋವಿಡ್ ಪಿಡುಗಿನ ಎರಡನೇ ಅಲೆ ಸಂದರ್ಭದಲ್ಲಿ ಎದುರಾದ ಆಮ್ಲಜನಕ ಕೊರತೆ ವಿಷಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಶುಕ್ರವಾರ ಮನವಿ ಮಾಡಿದರು.
ನವದೆಹಲಿ: ಕೋವಿಡ್ ಪಿಡುಗಿನ ಎರಡನೇ ಅಲೆ ಸಂದರ್ಭದಲ್ಲಿ ಎದುರಾದ ಆಮ್ಲಜನಕ ಕೊರತೆ ವಿಷಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಶುಕ್ರವಾರ ಮನವಿ ಮಾಡಿದರು.
'ದುಃಖದ ಸಂಗತಿಯೆಂದರೆ, ಇಂತಹ ಪರಿಸ್ಥಿತಿಯಲ್ಲಿಯೂ ಅನೇಕರು ರಾಜಕೀಯ ಮಾಡುವುದನ್ನು ನಿಲ್ಲಿಸಿಲ್ಲ. ಈ ನಿಟ್ಟಿನಲ್ಲಿ ನಾವು ನಡೆಸಿರುವ ಪ್ರಾಮಾಣಿಕ ಪ್ರಯತ್ನಗಳನ್ನು ಗಮನಿಸಿ. ಇದು ರಾಜಕೀಯದ ವಿಷಯವಲ್ಲ' ಎಂದು ಅವರು ಉತ್ತರಿಸಿದರು.
ಆಮ್ಲಜನಕ ಕೊರತೆಯಿಂದ ಸಂಭವಿಸಿದ ಸಾವುಗಳ ಬಗ್ಗೆ ವಿರೋಧ ಪಕ್ಷಗಳು ಪ್ರಶ್ನಿಸಿದಾಗ, ಈ ಸಂಬಂಧ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಂದ ದತ್ತಾಂಶಗಳನ್ನು ಪಡೆದುಕೊಂಡಿದೆ. ಪಂಜಾಬ್ ಸರ್ಕಾರ ಮಾತ್ರ ಆಮ್ಲಜನಕ ಕೊರತೆಯಿಂದ ನಾಲ್ಕು ಸಾವುಗಳು ಸಂಭವಿಸಿದ ಶಂಕೆ ವ್ಯಕ್ತಪಡಿಸಿದೆ. ಈ ಕುರಿತು ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು.
ಆಮ್ಲಜನಕ ಕೊರತೆಯಿಂದ ಸಂಭವಿಸಿದ ಸಾವುಗಳ ಮಾಹಿತಿಯನ್ನು ಮುಚ್ಚಿಡುವುದಿಲ್ಲ ಎಂದು ಸ್ವತಃ ಪ್ರಧಾನಿ ಅವರೇ ಮುಖ್ಯಮಂತ್ರಿಗಳೊಂದಿಗಿನ ಸಭೆಯಲ್ಲಿ ತಿಳಿಸಿದ್ದಾರೆ ಎಂದು ಅವರು ತಿಳಿಸಿದರು.