ನವದೆಹಲಿ: ನಟಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‍ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನಟ ದಿಲೀಪ್ ಹಿಂಪಡೆದಿದ್ದಾರೆ. ಪ್ರಕರಣದ ವಿಚಾರಣೆ ಪೂರ್ಣಗೊಂಡ ನಂತರ ಅರ್ಜಿಯನ್ನು ಹಿಂಪಡೆಯಲಾಗಿದೆ. ಈ ಪ್ರಕರಣದಲ್ಲಿ ತಮ್ಮನ್ನು ಖುಲಾಸೆಗೊಳಿಸುವಂತೆ ಕೋರಿ ದಿಲೀಪ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಪ್ರಸ್ತುತ ಎರ್ನಾಕುಳಂನ ವಿಚಾರಣಾ ನ್ಯಾಯಾಲಯದಲ್ಲಿ ವಿಚಾರಣೆ ಪ್ರಗತಿಯಲ್ಲಿದೆ. ವಿಚಾರಣೆ ಅಂತಿಮ ಹಂತದಲ್ಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಸುಮಾರು 200 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈ ಪ್ರಕರಣದಲ್ಲಿ ಮತ್ತೆ ಪ್ರಕರಣವನ್ನು ಮುಂದುವರಿಸಲು ಬಯಸುವುದಿಲ್ಲ ಎಂದು ದಿಲೀಪ್ ಪರ ವಕೀಲರು ಸುಪ್ರೀಂ ಕೋರ್ಟ್‍ಗೆ ತಿಳಿಸಿದರು. ಈ ಹಿಂದೆ ದಿಲೀಪ್ ತನ್ನನ್ನು ಖುಲಾಸೆಗೊಳಿಸುವಂತೆ ಕೇರಳ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದನ್ನು ತಿರಸ್ಕರಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಈ ಪ್ರಕರಣದ ಆರೋಪಗಳನ್ನು ದಿಲೀಪ್ ಅವರು ತಪೆÇ್ಪಪ್ಪಿಕೊಂಡಿದ್ದು, ತಾನು ಬಲಿಪಶುವಾಗಿದ್ದು ಅರ್ಜಿ ಹಿಂಪಡೆಯಲಾಗುವುದೆಂದು ತಿಳಿಸಿದ್ದಾರೆ.