ನವದೆಹಲಿ: ಕುತ್ತಿಗೆ ಬೆನ್ನುಮೂಳೆಯೊಂದರ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಈಗ ಚೇತರಿಸಿಕೊಳ್ಳುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಯೋಗ ಕ್ಷೇಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ವಿಚಾರಿಸಿದರು.
ನವದೆಹಲಿ: ಕುತ್ತಿಗೆ ಬೆನ್ನುಮೂಳೆಯೊಂದರ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಈಗ ಚೇತರಿಸಿಕೊಳ್ಳುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಯೋಗ ಕ್ಷೇಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ವಿಚಾರಿಸಿದರು.
61 ವರ್ಷದ ಠಾಕ್ರೆ, ಇದೀಗ ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಕಲಾಪದಲ್ಲಿ ಭಾಗವಹಿಸಲಿದ್ದಾರೆ ಎಂದು ಶಿವಸೇನಾ ನಾಯಕ ವಿನಾಯಕ್ ರಾವುತ್ ಪ್ರಧಾನಿಗೆ ಮಾಹಿತಿ ನೀಡಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನ ಮುಗಿದ ನಂತರ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಸದನದ ನಾಯಕರು ನಡೆಸುವ ಸಾಂಪ್ರದಾಯಿಕ ಸಭೆಯಲ್ಲಿ ಶಿವಸೇನಾ ಸಂಸದರಿಂದ ನರೇಂದ್ರ ಮೋದಿ ಅವರು, ಠಾಕ್ರೆ ಅವರ ಆರೋಗ್ಯದ ಕುರಿತು ಮಾಹಿತಿ ನೀಡುವಂತೆ ಕೇಳಿದ್ದರು.
ಸಭಾಪತಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಚಿವರಾದ ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಕೂಡ ಹಾಜರಿದ್ದರು.
ಶಸ್ತ್ರ ಚಿಕಿತ್ಸೆ ಬಳಿಕ ಠಾಕ್ರೆ ಇತ್ತೀಚೆಗೆ ವಿಧಾನ ಭವನಕ್ಕೆ ಭೇಟಿ ನೀಡಿದ್ದರು. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ತಮ್ಮ ಗೃಹ ಕಚೇರಿಯಿಂದಲೇ ಅವರು ಕಾರ್ಯನಿರ್ವಹಿಸುತ್ತಿದ್ದಾರೆ.