HEALTH TIPS

ಸಂಸದರ ಅಮಾನತು ಗದ್ದಲ: ರಾಜ್ಯಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ

            ನವದೆಹಲಿ: 12 ಸಂಸದರ ಅಮಾನತು ವಿಚಾರವಾಗಿ ಸರ್ಕಾರ ಮತ್ತು ವಿರೋಧ ಪಕ್ಷಗಳು ಒಮ್ಮತದ ನಿರ್ಧಾರಕ್ಕೆ ಬರಬೇಕೆಂದು ಸಭಾಪತಿ ಎಂ ವೆಂಕಯ್ಯ ನಾಯ್ಡು ಒತ್ತಾಯಿಸಿದರೂ ಸಹ ಪ್ರತಿಪಕ್ಷಗಳ ಗದ್ದಲ ಮುಂದುವರಿದಿದ್ದರಿಂದ ರಾಜ್ಯಸಭೆ ಕಲಾಪವನ್ನು ಶುಕ್ರವಾರ ಒಂದು ದಿನದ ಮಟ್ಟಿಗೆ ಮುಂದೂಡಲಾಯಿತು.

          ಸಚಿವ ಪೀಯೂಷ್ ಗೋಯಲ್ ಮತ್ತು ವಿರೋಧ ಪಕ್ಷದ ಕೆಲವು ಹಿರಿಯ ನಾಯಕರನ್ನು ಭೇಟಿ ಮಾಡಿದ ಸಭಾಪತಿ ವೆಂಕಯ್ಯ ನಾಯ್ಡು, ಈ ವಿಚಾರವಾಗಿ ಚರ್ಚೆ ನಡೆಸುವಂತೆ ಮನವಿ ಮಾಡಿದ್ದರು.

'ಇಂದು, ನಾನು ಸದನದ ನಾಯಕರೊಂದಿಗೆ ಮತ್ತು ವಿರೋಧ ಪಕ್ಷದ ಕೆಲವು ಹಿರಿಯ ಸದಸ್ಯರೊಂದಿಗೆ ಮಾತುಕತೆ ನಡೆಸಿದ್ದೇನೆ. ಸದನವು ಸುಗಮವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಲು ದಯವಿಟ್ಟು ಒಂದು ಒಮ್ಮತಕ್ಕೆ ಬರುವಂತೆ ನಾನು ಪ್ರತಿಯೊಬ್ಬರಿಗೂ ಮನವಿ ಮಾಡುತ್ತೇನೆ' ಎಂದು ಅವರು ಹೇಳಿದರು.

              'ಚರ್ಚೆಗೆ ಅನುಕೂಲವಾಗುವಂತೆ, ಸೋಮವಾರಕ್ಕೆ ನಾನು ಸದನವನ್ನು ಮುಂದೂಡುತ್ತಿದ್ದೇನೆ' ಎಂದು ಘೋಷಿಸಿದರು.

           ಕಳೆದ ಹಲವು ದಿನಗಳಿಂದ ಸದನದ ಕಲಾಪಕ್ಕೆ ಪ್ರತಿಪಕ್ಷಗಳು ಅಡ್ಡಿಪಡಿಸುತ್ತಿವೆ. 12 ಮಂದಿ ಸಂಸದರ ಅಮಾನತು ವಿಚಾರವಾಗಿ ಮೇಲ್ಮನೆಯಲ್ಲಿ ಹಗ್ಗಜಗ್ಗಾಟ ಮುಂದುವರಿದಿದ್ದು, ಅಮಾನತು ಹಿಂಪಡೆಯುವಂತೆ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸುತ್ತಿರುವುದರಿಂದ ಕಲಾಪ ಅಸ್ತವ್ಯಸ್ತಗೊಂಡಿದೆ.

              ಸಂಸದರ ಅಮಾನತು ಕ್ರಮವು ಪ್ರಜಾಪ್ರಭುತ್ವ ವಿರೋಧಿ ಮತ್ತು ನಿಯಮಗಳಿಗೆ ವಿರುದ್ಧವಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದರೆ, ಸಂಸದರು ತಮ್ಮ ವರ್ತನೆಗೆ ಮೊದಲು ಕ್ಷಮೆಯಾಚಿಸಬೇಕು, ಬಳಿಕ ಅಮಾನತು ಆದೇಶವನ್ನು ಹಿಂಪಡೆಯಲಾಗುತ್ತದೆ ಎಂದು ಸರ್ಕಾರ ಪಟ್ಟು ಹಿಡಿದಿದೆ.

           ಕಳೆದ ಮುಂಗಾರು ಅಧಿವೇಶನದಲ್ಲಿ ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ಆಗಸ್ಟ್ 11 ರಂದು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯ 12 ಸದಸ್ಯರನ್ನು ಅಮಾನತು ಮಾಡಲಾಗಿತ್ತು.

           ಅಮಾನತುಗೊಂಡವರಲ್ಲಿ ಕಾಂಗ್ರೆಸ್‌ನ ಸೈಯದ್ ನಾಸೀರ್ ಹುಸೇನ್, ಅಖಿಲೇಶ್ ಪ್ರಸಾದ್ ಸಿಂಗ್, ಪೌಲೊ ದೇವಿ ನೇತಮ್, ಛಾಯಾ ವರ್ಮ, ರಿಪುನ್ ಬೋರಾ ಮತ್ತು ರಾಜಮಣಿ ಪಟೇಲ್ ಸೇರಿದ್ದಾರೆ. ಪ್ರಿಯಾಂಕಾ ಚತುರ್ವೇದಿ, ಅನಿಲ್ ದೇಸಾಯಿ ಶಿವಸೇನಾ ಸಂಸದರು. ಎಲಾಮರಮ್ ಕರೀಮ್ ಸಿಪಿಐಎಂ, ಬಿನಾಯ್ ವಿಶ್ವಂ ಸಿಪಿಐ ಮತ್ತು ದೋಲಾ ಸೇನಾ ಹಾಗೂ ಶಾಂತ ಛೇತ್ರಿ ತೃಣಮೂಲ ಕಾಂಗ್ರೆಸ್‌ ಸಂಸದರಾಗಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries