ನವದೆಹಲಿ: ಹಿಂದೂ ಮಹಾಸಾಗರದಲ್ಲಿ ಚಂಡಮಾರುತ ಉಂಟಾಗಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕನ್ಯಾಕುಮಾರಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಡಿಸೆಂಬರ್ 18ರವರೆಗೆ ಆಗ್ನೇಯ ಶ್ರೀಲಂಕಾ ಮತ್ತು ಹಿಂದೂ ಮಹಾಸಾಗರದಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.