ತಿರುವನಂತಪುರ: ರಾಜ್ಯದಲ್ಲಿ ಒಮಿಕ್ರಾನ್ ಸೋಂಕು ಹೆಚ್ಚಳಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ 10 ಗಂಟೆಯ ನಂತರದ ಪ್ರದರ್ಶನಕ್ಕೆ ಅವಕಾಶವಿರುವುದಿಲ್ಲ. ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ರಾತ್ರಿ ನಿರ್ಬಂಧ ಹೇರಲಾಗಿರುವುದರಿಂದ ಚಿತ್ರಮಂದಿರಗಳಲ್ಲಿ ಸೆಕೆಂಡ್ ಶೋ ನಡೆಸುವುದಿಲ್ಲ ಎಂದು ಸರ್ಕಾರ ಘೋಷಿಸಿದೆ. ಹೊಸ ವರ್ಷಾಚರಣೆ ಅಂಗವಾಗಿ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ನಿರ್ಬರ್ಂಧಗಳನ್ನು ಹೇರಲಾಗಿದೆ.
ಡಿಸೆಂಬರ್ 31 ರಂದು ರಾತ್ರಿ 10 ಗಂಟೆಯ ನಂತರ ಹೊಸ ವರ್ಷದ ಆಚರಣೆಗಳನ್ನು ಅನುಮತಿಸಲಾಗುವುದಿಲ್ಲ. ರಾಜ್ಯದಲ್ಲಿ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಂಚಾರ ನಿರ್ಬಂಧ ಹೇರಲಾಗಿದೆ. 10 ಗಂಟೆಗೆ ಅಂಗಡಿಗಳನ್ನು ಮುಚ್ಚಬೇಕು. ಬಾರ್‍ಗಳು, ಕ್ಲಬ್‍ಗಳು, ಹೋಟೆಲ್‍ಗಳು, ರೆಸ್ಟೋರೆಂಟ್‍ಗಳು ಮತ್ತು ತಿನಿಸುಗಳ ಅಂಗಡಿಗಳಲ್ಲಿ ಶೇಕಡಾ 50 ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.
ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಹೆಚ್ಚಿನ ಜನಸಂದಣಿಯು ಕಂಡುಬರುವ ಬೀಚ್‍ಗಳು, ಶಾಪಿಂಗ್ ಮಾಲ್‍ಗಳು ಮತ್ತು ಸಾರ್ವಜನಿಕ ಉದ್ಯಾನವನಗಳಂತಹ ಪ್ರದೇಶಗಳಲ್ಲಿ ಪೋಲೀಸ್ ಅಧಿಕಾರಿಗಳಿಂದ ಸಾಕಷ್ಟು ಬೆಂಬಲದೊಂದಿಗೆ ಜಿಲ್ಲಾಧಿಕಾರಿಗಳು ಸೆಕ್ಟರಲ್ ಮ್ಯಾಜಿಸ್ಟ್ರೇಟ್‍ಗಳನ್ನು ನಿಯೋಜಿಸುತ್ತಾರೆ. ನಿಯಂತ್ರಣ ಚಟುವಟಿಕೆಗಳಿಗೆ ಹೆಚ್ಚಿನ ಪೋಲೀಸರನ್ನು ನಿಯೋಜಿಸಲು ಸರ್ಕಾರ ನಿರ್ಧರಿಸಿದೆ.