ನವದೆಹಲಿ: ಹಿಂದುತ್ವದಲ್ಲಿ ನಂಬಿಕೆಯುಳ್ಳವರು ಎಲ್ಲಾ ಭಾರತೀಯರ ಡಿಎನ್‌ಎ ಒಂದೇ ಎಂದು ಭಾವಿಸುತ್ತಾರೆ. ಆದರೆ, ಹಿಂದುಗಳಾದವರು ಮಾತ್ರ ಪ್ರತಿಯೊಬ್ಬ ವ್ಯಕ್ತಿಯೂ ವಿಶಿಷ್ಟವಾದ ಡಿಎನ್‌ಎ ಹೊಂದಿರುವುದಾಗಿ ನಂಬುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.

40,000 ವರ್ಷಗಳಿಂದ ಎಲ್ಲಾ ಭಾರತೀಯರ ಡಿಎನ್‌ಎ ಒಂದೇ ಆಗಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಇತ್ತೀಚೆಗೆ ಹೇಳಿದ್ದರು. ಮೋಹನ್ ಭಾಗವತ್ ಅವರ ಹೇಳಿಕೆಗೆ ರಾಹುಲ್ ಪ್ರತಿಕ್ರಿಯಿಸಿದ್ದಾರೆ.
'ಪ್ರತಿಯೊಬ್ಬ ವ್ಯಕ್ತಿಯ ಡಿಎನ್‌ಎ ಕೂಡ ವಿಭಿನ್ನ ಮತ್ತು ವಿಶಿಷ್ಟವಾಗಿದೆ ಎಂದು ಹಿಂದೂಗಳು ನಂಬುತ್ತಾರೆ,' ಎಂದು ಅವರು ಹೇಳಿದ್ದಾರೆ.
ಹಿಂದು ಮತ್ತು ಹಿಂದುತ್ವವಾದಿಗಳ ನಡುವೆ ವ್ಯತ್ಯಾಸವಿರುವುದಾಗಿ ರಾಹುಲ್ ಗಾಂಧೀಜಿ ಇತ್ತೀಚೆಗೆ ಪ್ರತಿಪಾದಿಸಲಾರಂಭಿಸಿದ್ದಾರೆ. ಗಾಂಧಿ ಹಿಂದು ಎಂದೂ, ಗೋಡ್ಸೆ ಹಿಂದುತ್ವವಾದಿ ಎಂದು ರಾಹುಲ್ ವಿಶ್ಲೇಷಿಸಿದ್ದಾರೆ. ಸದ್ಯ ದೇಶದ ಆಡಳಿತ ಹಿಂದುತ್ವವಾದಿಗಳ ಕೈಲಿದ್ದು, ಅವರನ್ನು ಅಧಿಕಾರದಿಂದ ಕೆಳಗಿಳಿಸಿ ಹಿಂದುಗಳನ್ನು ಅಧಿಕಾರದಲ್ಲಿ ಕೂರಿಸಬೇಕು ಎಂದು ಅವರು ಇತ್ತೀಚೆಗೆ ಆಗ್ರಹಿಸಿದ್ದರು.