ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ, ಲೇಖಕ ದಿ. ಪೂರ್ಣಚಂದ್ರ ತೇಜಸ್ವಿಯವರ ಪತ್ನಿ, ಕುವೆಂಪುರವರ ಸೊಸೆ ರಾಜೇಶ್ವರಿ ತೇಜಸ್ವಿ(84 ) ಅಲ್ಪಕಾಲದ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ.
ಬೆಂಗಳೂರಿನ ಹೆಚ್ ಎಸ್ ಆರ್ ಲೇ ಔಟ್ ನ ತಮ್ಮ ಪುತ್ರಿಯ ನಿವಾಸದಲ್ಲಿ ಕೊನೆಕಾಲವನ್ನು ಕಳೆಯುತ್ತಿದ್ದ ರಾಜೇಶ್ವರಿಯವರ ದೇಹವನ್ನು ದಾನ ಮಾಡಲು ಕುಟುಂಬದವರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.