ತಿರುವನಂತಪುರ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಅಲಪ್ಪುಳದಲ್ಲಿ ನಡೆದ ಎರಡು ಕೊಲೆಗಳ ಬಗ್ಗೆ ಕೆಲವೇ ಗಂಟೆಗಳಲ್ಲಿ ಪ್ರತಿಕ್ರಿಯಿಸಿದ್ದಾರೆ. ಕೇರಳದಲ್ಲಿ ನಡೆಯುತ್ತಿರುವ ರಾಜಕೀಯ ಹತ್ಯೆಗಳು ನಾಚಿಕೆಗೇಡಿನ ಸಂಗತಿ ಎಂದು ರಾಜ್ಯಪಾಲರು ಪ್ರತಿಕ್ರಿಯಿಸಿದ್ದಾರೆ. ಇದರಿಂದ ಕೇರಳದಂತಹ ರಾಜ್ಯಕ್ಕೆ ಒಳ್ಳೆಯದಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇಂತಹ ಅಪರಾಧಗಳು ನಡೆದರೆ ಮತ್ತೊಂದೆಡೆ ಯಾವ ಅಭಿವೃದ್ಧಿ ಕಾರ್ಯಗಳು ನಡೆದರೂ ಲೆಕ್ಕಕ್ಕಿಲ್ಲ. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ರಾಜಕೀಯ ಕಾರಣಗಳಿಂದ ಸಾವು ಸಂಭವಿಸಬಾರದು ಎಂದೂ ಆರಿಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ. ದೇಶದ ನ್ಯಾಯ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಮೇಲೆ ಜನತೆ ನಂಬಿಕೆ ಇಡಬೇಕು ಎಂದರು.