ನವದೆಹಲಿ: ಕೊರೊನಾವೈರಸ್‌ನ ರೂಪಾಂತರಿ ತಳಿಯಾಗಿ ಆತಂಕ ಸೃಷ್ಟಿಸಿರುವ 'ಓಮೈಕ್ರಾನ್' ಭಾರತದಲ್ಲೂ ಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ.
ನವದೆಹಲಿ: ಕೊರೊನಾವೈರಸ್‌ನ ರೂಪಾಂತರಿ ತಳಿಯಾಗಿ ಆತಂಕ ಸೃಷ್ಟಿಸಿರುವ 'ಓಮೈಕ್ರಾನ್' ಭಾರತದಲ್ಲೂ ಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಎಲ್ಲ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಶೀಘ್ರವೇ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಈಗಾಗಲೇ ಎಲ್ಲ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕೋವಿಡ್ ತಪಾಸಣೆ ಕೇಂದ್ರಗಳನ್ನು ಹೆಚ್ಚಿಸಲಾಗಿದ್ದು, ವಿದೇಶಗಳಿಂದ ಬರುವವರು ಕಡ್ಡಾಯವಾಗಿ 14 ದಿನಗಳ ಟ್ರಾವೆಲ್ ಹಿಸ್ಟರಿಯನ್ನು ಮತ್ತು ಕೋವಿಡ್ ನೆಗೆಟಿವ್ ವರದಿಯನ್ನು ಒದಗಿಸಬೇಕು ಎಂದು ಸಚಿವರು ಆದೇಶಿಸಿದ್ಧಾರೆ.
ಓಮೈಕ್ರಾನ್ ವಿಷಯವಾಗಿ ಹಾಗೂ ಅಂತರರಾಷ್ಟ್ರಿಯ ವಿಮಾನ ನಿಲ್ದಾಣಗಳಲ್ಲಿನ ಸದ್ಯದ ಪರಿಸ್ಥಿತಿಯನ್ನು ಸಭೆಯಲ್ಲಿ ಮಾಂಡವೀಯ ಪರಿಶೀಲಿಸಲಿದ್ದಾರೆ ಎಂದು ತಿಳಿದು ಬಂದಿದೆ.