HEALTH TIPS

ಕೆ.ಎಸ್.ಆರ್.ಟಿ.ಸಿ ವೇತನ ಪರಿಷ್ಕರಣೆ; ವಿವಾದ ಸಂಪೂರ್ಣವಾಗಿ ಬಗೆಹರಿದಿಲ್ಲ ಎಂದ ಸಚಿವರು

                                                         

             ತಿರುವನಂತಪುರ: ಕೆ.ಎಸ್.ಆರ್.ಟಿ.ಸಿ ನೌಕರರ ವೇತನ ಪರಿಷ್ಕರಣೆ ವಿಚಾರದಲ್ಲಿ ವಿವಾದವಿದೆ ಎಂದು ಸಾರಿಗೆ ಸಚಿವ ಆಂಟನಿ ರಾಜು ಹೇಳಿದ್ದಾರೆ. ಆದರೆ, ಸಣ್ಣಪುಟ್ಟ ವಿಚಾರಗಳಿಗೆ ಮಾತ್ರ ವಿವಾದವಾಗಿದ್ದು, ಇತರೆ ಪ್ರಮುಖ ವಿಚಾರಗಳಿಗೆ ಒಪ್ಪಿಗೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

                ವಿವಾದದ ಕುರಿತು ಮತ್ತೊಮ್ಮೆ ಚರ್ಚಿಸಲಾಗುವುದು. ಪ್ರಸ್ತುತ ಜನವರಿ 3 ರಂದು ಮಾತುಕತೆ ನಡೆಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು. ನೌಕರರಿಗೆ ಘೋಷಿಸಿರುವ ಪರಿಷ್ಕøತ ವೇತನವನ್ನು ಶೀಘ್ರವೇ ನೀಡಲಾಗುವುದು ಮತ್ತು ಅದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸಚಿವರು ತಿಳಿಸಿದರು. ಶೀಘ್ರವೇ ವೇತನ ಪರಿಷ್ಕರಣೆ ವಿಧೇಯಕಕ್ಕೆ ಸಹಿ ಹಾಕುವ ವಿಶ್ವಾಸವಿದೆ ಎಂದರು.

                ಈ ಮಧ್ಯೆ, ಶೀಘ್ರವೇ ವೇತನ ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಕೆಎಸ್‍ಆರ್‍ಟಿಸಿ ಕಾರ್ಮಿಕ ಸಂಘಟನೆಗಳು ಘೋಷಿಸಿವೆ. ಜನವರಿಯಲ್ಲಿ ನಡೆಯಲಿರುವ ಸಚಿವರ ಮಾತುಕತೆಯನ್ನು ಬಹಿಷ್ಕರಿಸುವುದಾಗಿ ಕಾರ್ಮಿಕರು ಎಚ್ಚರಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries