ಕಾನ್ಪುರ: ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ ಓಮೈಕ್ರಾನ್‌ನಿಂದಾಗಿ ದೇಶದಲ್ಲಿ ಕೋವಿಡ್ ಮೂರನೇ ಅಲೆ ಕಾಣಿಸಿಕೊಳ್ಳಲಿದೆ. ಇದು ಫೆಬ್ರುವರಿ ವೇಳೆಗೆ ಉತ್ತಂಗ ಸ್ಥಿತಿ ತಲುಪುವ ಸಾಧ್ಯತೆ ಇದೆ ಎಂದು ಕಾನ್ಪುರ ಐಐಟಿ ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಆರೋಗ್ಯ ವಿಜ್ಞಾನಗಳಿಗೆ ಸಂಬಂಧಿಸಿದ ಆನ್‌ಲೈನ್ ತಾಣ 'ಮೆಡ್‌ಆರ್‌ಎಕ್ಸ್‌ಐವಿ'ಯಲ್ಲಿ ಪ್ರಕಟವಾದ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಜಗತ್ತಿನ ಬೆಳವಣಿಗೆಗಳನ್ನು ಗಮನಿಸಿ ಭಾರತದಲ್ಲಿ ಮೂರನೇ ಅಲೆಯ ಕುರಿತು ಅಂದಾಜಿಸಲಾಗಿದೆ. ಭಾರತದಲ್ಲಿ ಕೋವಿಡ್ ಮೂರನೇ ಅಲೆ ಡಿಸೆಂಬರ್ ಮಧ್ಯ ಭಾಗದಲ್ಲೇ ಆರಂಭವಾದಂತಿದೆ. ಫೆಬ್ರುವರಿಯಲ್ಲಿ ಗರಿಷ್ಠಮಟ್ಟ ತಲುಪಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
ಸಂಖ್ಯಾಶಾಸ್ತ್ರೀಯ ವಿಧಾನವನ್ನು ಬಳಸಿಕೊಂಡು ಸಂಶೋಧಕರು ಮೂರನೇ ಅಲೆಗೆ ಸಂಬಂಧಿಸಿದ ಲೆಕ್ಕಾಚಾರ ಹಾಕಿದ್ದಾರೆ. ದೇಶದಲ್ಲಿ ಕೋವಿಡ್‌ನ ಮೊದಲ ಮತ್ತು ಎರಡನೇ ಅಲೆಗೆ ಸಂಬಂಧಿಸಿದ ದತ್ತಾಂಶಗಳು, ವಿವಿಧ ದೇಶಗಳಲ್ಲಿ ಓಮೈಕ್ರಾನ್ ಪ್ರಸರಣಕ್ಕೆ ಸಂಬಂಧಿಸಿದ ದತ್ತಾಂಶಗಳನ್ನೂ ಸಂಶೋಧನೆಗೆ ಬಳಸಿಕೊಳ್ಳಲಾಗಿದೆ.