ಜೊಹಾನ್ಸ್ ಬರ್ಗ್: ಕೋವಿಡ್ 3ನೇ ಅಲೆಯ ಸಂದರ್ಭದಲ್ಲಿ ಓಮಿಕ್ರಾನ್ ರೂಪಾಂತರಿ ಕಂಡುಬಂದಿದ್ದು ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತಿರುವುದು ದಕ್ಷಿಣ ಆಫ್ರಿಕಾ ತಜ್ಞರಲ್ಲಿ ಆತಂಕವನ್ನುಂಟುಮಾಡಿದೆ. ನಿನ್ನೆ ಒಂದೇ ದಿನ ದೇಶದಲ್ಲಿ 16 ಸಾವಿರದ 55 ಮಂದಿಯಲ್ಲಿ ಸೋಂಕು ವಕ್ಕರಿಸಿದ್ದು 25 ಮಂದಿ ಮೃತಪಟ್ಟಿದ್ದಾರೆ.
ಈ ಹಿಂದೆ ಒಂದು ಮತ್ತು ಎರಡನೇ ಕೋವಿಡ್ ಅಲೆ ಸಂದರ್ಭದಲ್ಲಿ ಮಕ್ಕಳು ಹೆಚ್ಚಾಗಿ ಸೋಂಕಿಗೆ ತುತ್ತಾಗಿರಲಿಲ್ಲ. ಆಸ್ಪತ್ರೆಗಳಿಗಂತೂ ದಾಖಲಾಗಿರುವ ಮಕ್ಕಳ ಸಂಖ್ಯೆ ಇಡೀ ವಿಶ್ವದಲ್ಲಿ ಕಡಿಮೆಯೇ. ಆದರೆ ಮೂರನೇ ಅಲೆಯಲ್ಲಿ 5 ವರ್ಷಕ್ಕಿಂತ ಕೆಳಗಿನ ಮಕ್ಕಳು ಮತ್ತು 15ರಿಂದ 19 ವರ್ಷದೊಳಗಿನ ಹದಿಹರೆಯದವರು ಮೂರನೇ ಅಲೆಯ ಕೋವಿಡ್ ಸೋಂಕಿಗೆ ಬೇಗನೆ ಒಳಗಾಗುತ್ತಿದ್ದಾರೆ.
ಹಲವು ದೇಶಗಳಲ್ಲಿ ಇದು ಕೋವಿಡ್ ನಾಲ್ಕನೇ ಅಲೆಯ ಆರಂಭವಾಗಿದ್ದು ವಿಶೇಷವಾಗಿ ಮಕ್ಕಳಲ್ಲಿ ಸೇರಿದಂತೆ ಎಲ್ಲಾ ವಯೋಮಾನದವರಲ್ಲಿ ಬೇಗವಾಗಿ ಹರಡುತ್ತಿದೆ ಎಂದು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕಬಲ್ ಡಿಸೀಸ್ (NICD)ಯ ಡಾ ವಾಸಿಲಾ ಜಸ್ಸತ್ ಹೇಳಿದ್ದಾರೆ.