ಖಜುರಾಹೋದಲ್ಲಿದ್ದ ಕಾಳಿ ಚರಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದ ರಾಯ್‌ಪುರ್ ದಲ್ಲಿ ನಡೆದ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಕಾಳಿಚರಣ್, ಗಾಂಧೀಜಿ ಅವರನ್ನು ನಿಂದಿಸಿದ್ದಲ್ಲದೆ, ಅವರನ್ನು ಕೊಂದ ನಾಥೂರಾಂ ಗೋಡ್ಸೆಯನ್ನು ಹೊಗಳಿದ್ದರು.
ರಾಯ್ ಪುರ್ ಮಾಜಿ ಮೇಯರ್ ಪ್ರಮೋದ್ ದುಬೆ ನೀಡಿದ್ದ ದೂರು ಆಧರಿಸಿ ತಿಕ್ರಪಾರಾ ಠಾಣೆ ಪೊಲೀಸರು ಕಾಳಿ ಚರಣ್ ವಿರುದ್ಧ ಐಪಿಸಿ ಸೆಕ್ಷನ್ 505 (2) 294 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ರಾಯ್ ಪುರ್ ಪೊಲೀಸರು ಪ್ರಕರಣ ದಾಖಲಿಸಿದ ಕೂಡಲೇ ಕಾಳಿಚರಣ್ ಮಹಾರಾಜ್ ಚತ್ತೀಸಘಡದಿಂದ ನಾಪತ್ತೆಯಾಗಿದ್ದರು ಎಂದು ವರದಿಯಾಗಿದೆ.