ಭೋಪಾಲ್: ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಯುರೋಪಿಯನ್ ರಾಷ್ಟ್ರದಲ್ಲಿ ವೈರಾಲಜಿ ಸಂಶೋಧಕರಾಗಿರುವ 28 ವರ್ಷದ ಜರ್ಮನ್ ವ್ಯಕ್ತಿಯೊಬ್ಬರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಭೋಪಾಲ್: ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಯುರೋಪಿಯನ್ ರಾಷ್ಟ್ರದಲ್ಲಿ ವೈರಾಲಜಿ ಸಂಶೋಧಕರಾಗಿರುವ 28 ವರ್ಷದ ಜರ್ಮನ್ ವ್ಯಕ್ತಿಯೊಬ್ಬರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಜರ್ಮನ್ ಸಂಶೋಧಕ ಹಾಗೂ ಆತನ ಮಹಿಳಾ ಸಹೋದ್ಯೋಗಿ ಈಗಾಗಲೇ ಕೋವಿಡ್-ವಿರೋಧಿ ಲಸಿಕೆ(ಎರಡು ಸಾಮಾನ್ಯ ಡೋಸ್ ಮತ್ತು ಒಂದು ಬೂಸ್ಟರ್ ಡೋಸ್) ಮೂರು ಡೋಸ್ ಗಳನ್ನು ತೆಗೆದುಕೊಂಡಿದ್ದಾರೆ.
ಭಾರತೀಯ ಸಹೋದ್ಯೋಗಿಯ ವಿವಾಹದಲ್ಲಿ ಪಾಲ್ಗೊಳ್ಳಲು ಈ ಯುವ ಸಂಶೋಧಕ ಮಹಿಳಾ ಸಹೋದ್ಯೋಗಿಯೊಂದಿಗೆ ಭಾನುವಾರ ಜಬಲ್ಪುರಕ್ಕೆ ಆಗಮಿಸಿದ್ದರು.
ಯುವ ಸಂಶೋಧಕರಿಗೆ ರಾಪಿಡ್ ಆಂಟಿಜೆನ್ ಪರೀಕ್ಷೆ(RAT)ಯಲ್ಲಿ ಕೋವಿಡ್ ನೆಗಟಿವ್ ಬಂದಿದೆ. ಆದರೆ ಆರ್ ಟಿಪಿಸಿಆರ್ ಪರೀಕ್ಷೆಯಲ್ಲಿ ಅವರಿಗೆ ಪಾಸಿಟಿವ್ ಬಂದಿದೆ. ಸಂಶೋಧಕರನ್ನು ಈಗ ಜಬಲ್‌ಪುರ ವೈದ್ಯಕೀಯ ಕಾಲೇಜಿನ ಕೋವಿಡ್ ಕೇರ್ ಸೆಂಟರ್‌ನಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ ಮತ್ತು ಅವರ ಮಾದರಿಯನ್ನು ಜೀನೋಮ್ ಸೀಕ್ವೆನ್ಸಿಂಗ್ ಗೆ ಕಳುಹಿಸಲಾಗಿದೆ.
"ಇದುವರೆಗೆ ಜಬಲ್‌ಪುರದಲ್ಲಿ ಜರ್ಮನ್ ವ್ಯಕ್ತಿಯ ಸಂಪರ್ಕಕ್ಕೆ ಬಂದ 40-50 ಜನರನ್ನು ಪತ್ತೆಹಚ್ಚಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರೆಲ್ಲರಿಗೂ ಕೋವಿಡ್ ನೆಗೆಟಿವ್ ಬಂದಿದೆ" ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.