ಕಾಸರಗೋಡು: ಸಾರ್ವಜನಿಕರು ಲೋಕೋಪಯೋಗಿ ಇಲಾಖೆ ನಡೆಸುವ ಕಾಮಗಾರಿಗಳ ವೀಕ್ಷಕರಾಗಿರದೆ, ಇಲಾಖೆಯ ಕಾವಲುಗಾರರಾಗಿರಬೇಕು ಎಂದು ಲೋಕೋಪಯೋಗಿ ಮತ್ತು ಪ್ರವಾಸೋದ್ಯಮ ಖಾತೆ ಸಚಿವ ಪಿ.ಎ ಮಹಮ್ಮದ್ ರಿಯಾಸ್ ತಿಳಿಸಿದ್ದಾರೆ.
ಅವರು ಕಯ್ಯೂರ್-ಚೆಂಬ್ರಕಾನಂ-ಪಾಲಕುನ್ನು ನೂತನ ರಸ್ತೆಯನ್ನು ಉದ್ಘಾಟಿಸಿ ಕಯ್ಯೂರ್ ಜಿವಿಎಚ್‍ಎಸ್‍ಎಸ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದರು. ಕೇರಳದಲ್ಲಿ 153 ಲೋಕೋಪಯೋಗಿ ಇಲಾಖೆ ವಿಶ್ರಾಂತಿಗೃಹಗಳಿದ್ದು, ಇವುಗಳನ್ನು ಆನ್‍ಲೈನ್ ಮೂಲಕ ಕಾಯ್ದಿರಿಸುವ ವ್ಯವಸ್ಥೆಯನ್ನು ಇಲಾಖೆ ಮಾಡಿರುವುದಾಗಿ ತಿಳಿಸಿದರು. ಪಿಲಿಕ್ಕೋಡ್ ಗ್ರಾಪಂ ಅಧ್ಯಕ್ಷ ಪ್ರಸನ್ನ ಕುಮಾರಿ ಅಧ್ಯಕ್ಷತೆ ವಹಿಸಿದ್ದರು. ಪಯ್ಯನ್ನೂರ್ ಶಾಸಕ ಟಿ.ಐ ಮಧುಸೂಧನನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧೀಗಳು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.