ಮಂಜೇಶ್ವರ: ಕಡಂಬಾರು ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ದಾರ ಕಾರ್ಯ ಪ್ರಾರಂಭಗೊಂಡಿದ್ದು, ನೂತನ ಗರ್ಭಗುಡಿ, ನಮಸ್ಕಾರ ಮಂಟಪ ಮತ್ತು ಇತರ ಅ|ಭಿವೃದ್ದಿ ಕಾರ್ಯಗಳು ವೇಗವಾಗಿ ನಡೆಯುತ್ತಿದೆ. ಮುಂದಿನ ಏಪ್ರಿಲ್ ತಿಂಗಳಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದೆ.
ಈ ನಿಟ್ಟಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಕಡಂಬಾರು ಶ್ರೀಕ್ಷೇತ್ರಕ್ಕೆ ಜೀರ್ಣೋದ್ದಾರ ಕಾರ್ಯಗಳಿಗೆ ಐದು ಲಕ್ಷ ರೂ. ಆರ್ಥಿಕ ನೆರವು ನೀಡಿರುತ್ತಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ದ.ಕ. ನಿರ್ದೇಶಕರಾದ ಪ್ರವೀಣ್ ಕುಮಾರ್ ಮಾತನಾಡಿ, ಶ್ರೀಕ್ಷೇತ್ರದ ಜೀರ್ಣೋದ್ದಾರ ಕಾರ್ಯಗಳು ಶೀಘ್ರವಾಗಿ ನೆರವೇರಿ ಪುನರ್ ಪ್ರತಿಷ್ಠಾ ಕಾರ್ಯ ನೆರವೇರಲಿ ಎಮದು ತಿಳಿಸಿದರು.
ಈ ಸಂದರ್ಭ ಗ್ರಾಮಾಭಿವೃದ್ದಿ ಯೋಜನೆಯ ಕಾಸರಗೋಡು ಜಿಲ್ಲಾ ಯೋಜನಾಧಿಕಾರಿ ಮುಖೇಷ್, ಜನಜಾಗೃತಿಯ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ್, ಮೇಲ್ವಿಚಾರಕ ಭಾಸ್ಕರ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಅ|ಶ್ವಥ್ ಪೂಜಾರಿ ಲಾಲ್ ಬಾಗ್ ಮತ್ತು ನಿಕಟಪೂರ್ವ ಅಧ್ಯಕ್ಷ ಗೋಪಾಲ ಶೆಟ್ಟಿ ಅರಿಬೈಲು ಉಪಸ್ಥಿತರಿದ್ದರು.