ಕುಂಬಳೆ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆ ಕಡಿತಗೊಳಿಸಿದ ಮಾದರಿಯಲ್ಲಿ ರಾಜ್ಯ ಸರ್ಕಾರವೂ ಇಂಧನ ತೆರಿಗೆಯನ್ನು ಕಡಿತಗೊಳಿಸಬೇಕು ಎಂದು ಒತ್ತಾಯಿಸಿ ಭಾರತೀಯ ಜನತಾ ಪಕ್ಷ ನೇತೃತ್ವದಲ್ಲಿ ಕುಂಬಳೆ ಮಂಡಲ ಸಮಿತಿ ನೇತೃತ್ವದಲ್ಲಿ ಸೀತಾಂಗೋಳಿಯಲ್ಲಿ ಧರಣಿ ಸತ್ಯಾಗ್ರಹ ನಡೆಸಿತು. ಭಾರತೀಯ ಜನತಾ ಪಕ್ಷದ ಕುಂಬಳೆ ಮಂಡಲ ಸಮಿತಿ ಅಧ್ಯಕ್ಷ ಸುನಿಲ್ ಅನಂತಪುರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ರಾಜ್ಯ ಸಮಿತಿ ಸದಸ್ಯ ಕೋಳಾರು ಸತೀಶ್ಚಂದ್ರ ಭಂಡಾರಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಬಿಜೆಪಿ ಬದಿಯಡ್ಕ ಮಂಡಲ ಪ್ರಧಾನ ಕಾರ್ಯದರ್ಶಿ ಪಿ.ಆರ್.ಸುನೀಲ್ ಅವರು ಕೇರಳ ಸರ್ಕಾರದ ದೇಶದ್ರೋಹಿ ನೀತಿಗಳನ್ನು ವಿವರಿಸಿದರು. ರಾಜ್ಯ ಎಸ್. ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎ.ಕೆ. ಕಯ್ಯಾರ್, ಕಾಸರಗೋಡು ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ರೈ, ಎಣ್ಮಕಜೆ ಪಂಚಾಯತಿ ಸಮಿತಿ ಅಧ್ಯಕ್ಷ ಸುಮಿತ್ ರಾಜ್ ಪೆರ್ಲ, ಮುರಳೀಧರ ಯಾದವ್ ನಾಯ್ಕಾಪು, ನಾರಾಯಣ ನಾಯ್ಕ ಅಡ್ಕಸ್ಥಳ, ಚಂದ್ರಕಾಂತ ಶೆಟ್ಟಿ, ರಮೇಶ್ ಭಟ್ ಕುಂಬಳೆ ಹಾಗೂ ಪಕ್ಷದ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬಿಜೆಪಿ ಕುಂಬಳೆ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಮಣಿಯಂಪಾರೆ ಸ್ವಾಗತಿಸಿ, ವಸಂತ ಮಯ್ಯ ವಂದಿಸಿದರು.