ಪುದಚೇರಿ: ದೇಶದಲ್ಲಿ ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್ ಹರಡುವಿಕೆ ಭೀತಿ ಹೆಚ್ಚಾಗಿರುವ ಬೆನ್ನಲ್ಲೇ ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್ ಲಸಿಕೆ ಕಡ್ಡಾಯಗೊಳಿಸಲಾಗಿದೆ.
ಪುದಚೇರಿ: ದೇಶದಲ್ಲಿ ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್ ಹರಡುವಿಕೆ ಭೀತಿ ಹೆಚ್ಚಾಗಿರುವ ಬೆನ್ನಲ್ಲೇ ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್ ಲಸಿಕೆ ಕಡ್ಡಾಯಗೊಳಿಸಲಾಗಿದೆ.
'ಪುದುಚೇರಿ ಸಾರ್ವಜನಿಕ ಆರೋಗ್ಯ ಕಾಯ್ದೆ 1973'ರ ಅಡಿಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಕೋವಿಡ್ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪುದುಚೇರಿ ಆರೋಗ್ಯ ಇಲಾಖೆ ಆದೇಶಿಸಿದೆ.
ದೇಶದಾದ್ಯಂತ ಈವರೆಗೆ 4 ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ 2 ಬೆಂಗಳೂರಿನಲ್ಲಿ, 1 ಮುಂಬೈಯಲ್ಲಿ ಹಾಗೂ ಮತ್ತೊಂದು ಗುಜರಾತ್‌ನಲ್ಲಿ ದೃಢಪಟ್ಟಿವೆ.