ಉಪ್ಪಳ: ಜೋಡುಕ್ಲು ಕಯ್ಯಾರು ಸೊಂದಿ ಶ್ರೀವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಗರ್ಭಗುಡಿಯ ಶಿಲಾನ್ಯಾಸವು ಉಡುಪಿ ಅದಮಾರು ಶ್ರೀವಿಶ್ವಪ್ರಿಯ ತೀರ್ಥ ಶ್ರೀಗಳ ಆಶೀರ್ವಾದಗಳೊಂದಿಗೆ ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳ ದಿವ್ಯಹಸ್ತದಿಂದ ಶಿಲ್ಪಿ ರಮೇಶ್ ಕಾರಂತ ಬೆದ್ರಡ್ಕ ಮಾರ್ಗದರ್ಶನದಲ್ಲಿ ಉಳಾಲು ಪೊಯ್ಯಕಂಡ ರವಿರಾಜ ಕಡಮಣ್ಣಾಯರ ಪೌರೋಹಿತ್ಯದಲ್ಲಿ ಇತ್ತೀಚೆಗೆ ನಡೆಯಿತು.
ಈ ಸಂದರ್ಭ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಡಾ.ಶ್ರೀಧೃ ಭಟ್ ಉಪ್ಪಳ ಅಧ್ಯಕ್ಷತೆ ವಹಿಸಿದ್ದರು. ಎಡನೀರು ಮಠದ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳು ಆಶೀರ್ವಚನ ನೀಡಿದರು. ಕಯ್ಯಾರು ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಭಾಕರ ಆಳ್ವ ಪಿಲಿಯಂದೂರು, ಉದ್ಯಮಿ ಶ್ರೀಧರ ಶೆಟ್ಟಿ ಮುಟ್ಟ ಅತಿಥಿಗಳಾಗಿದ್ದರು. ಶ್ರೀಕ್ಷೇತ್ರದ ತಂತ್ರಿವರ್ಯ ಉಳಾಲು ಪೊಯ್ಯಕಂಡ ರವಿರಾಜ ಕಡಮಣ್ಣಾಯ, ಜೀರ್ಣೋದ್ದಾರ ಸಮಿತಿ ಗೌರವಾಧ್ಯಕ್ಷ ಕೃಷ್ಣಪ್ಪ ಪೂಜಾರಿ ದೇರಂಬಳ, ಎಂ.ಕೆ.ಅಶೋಕ್ ಕುಮಾರ್ ಹೊಳ್ಳ ಕಯ್ಯಾರು ಉಪಸ್ಥಿತರಿದ್ದರು. ಸುರೇಶ್ ಶೆಟ್ಟಿ ಜೋಡುಕಲ್ಲು ಸ್ವಾಗತಿಸಿ, ನಿರೂಪಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ವೆಂಕಪ್ಪ ಶೆಟ್ಟಿ ಕಯ್ಯಾರು ವಂದಿಸಿದರು.