ನವದೆಹಲಿ: ಆಯಪ್ ಆಧಾರಿತ ಸೇವೆಯನ್ನು ಒದಗಿಸುವ ಓಲಾ, ಉಬರ್, ಜೊಮ್ಯಾಟೊ, ಸ್ವಿಗ್ಗಿ ಕಂಪನಿಗಳ ನೌಕರರಿಗೆ ಸಾಮಾಜಿಕ ಭದ್ರತೆ ಒದಗಿಸುವ ಕುರಿತ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ದಾಖಲಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಆಯಪ್ ಆಧಾರಿತ ಸಾರಿಗೆ ಸೇವೆ ಒದಗಿಸುವ ಸಂಸ್ಥೆಗಳ ನೌಕರರ ಒಕ್ಕೂಟವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲರಾದ ಇಂದಿರಾ ಜೈಸಿಂಗ್, ಗಾಯತ್ರಿ ಸಿಂಗ್ ಅವರು, ಪ್ರಸ್ತುತ ಈ ಸಂಸ್ಥೆಗಳ ನೌಕರರಿಗೆ ಯಾವುದೇ ರೀತಿಯ ಸಾಮಾಜಿಕ ಭದ್ರತೆ ಇಲ್ಲವಾಗಿದೆ ಎಂದು ಕೋರ್ಟ್ ಗಮನಕ್ಕೆ ತಂದರು.
ಸದ್ಯದ ಕಾಯ್ದೆಯಂತೆ ಈ ನೌಕರರು ಅಸಂಘಟಿತ ವಲಯದ ಕಾರ್ಮಿಕರಾಗಿದ್ದಾರೆ ಎಂದು ತಿಳಿಸಿದರು. ವಾದ ಆಲಿಸಿದ ನ್ಯಾಯಮೂರ್ತಿ ಎಲ್.ನಾಗೇಶ್ವರರಾವ್ ನೇತೃತ್ವದ ಪೀಠವು ಕೇಂದ್ರ ಸರ್ಕಾರ ಮತ್ತು ಅರ್ಜಿಯಲ್ಲಿ ಉಲ್ಲೇಖಿಸಿದ್ದ ಇತರೆ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿತು.