ಮಂಗಳೂರು: ಬಿಜೆಪಿಯ ಭೀಷ್ಮ ಎಂದೇ ಕರೆಯಲ್ಪಡುತ್ತಿದ್ದ, ಜನಸಂಘದ ಪ್ರಭಾವಿ ನಾಯಕ ಉರಿಮಜಲು ಕೆ. ರಾಮ ಭಟ್ ಅವರು ಇಂದು ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಅವರ ಸ್ವಗೃಹದಲ್ಲಿ ಕೊನೆಯುಸಿರೆಳೆದರು.
ರಾಮ ಭಟ್ ಅವರು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ 1977 ಹಾಗೂ 1983ರಲ್ಲಿ ಶಾಸಕರಾಗಿ ಆಯ್ಕೆ ಆಗಿದ್ದರು. ಆ ನಂತರ ಕ್ರಮೇಣ ಅವರು ಸಕ್ರಿಯ ರಾಜಕಾರಣದಿಂದ ದೂರ ಉಳಿದರು.