ನವದೆಹಲಿ: ಇಲ್ಲಿನ ಎಐಸಿಸಿಯ ಪ್ರಧಾನ ಕಚೇರಿಯಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷದ 137ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ವೇಳೆ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಧ್ವಜಾರೋಹಣ ನೆರವೇರಿಸುತ್ತಿರುವ ಸಂದರ್ಭದಲ್ಲಿ ಧ್ವಜವು ಬಿಚ್ಚಿಕೊಳ್ಳದೇ ಸೋನಿಯಾ ಅವರ ಕೈಮೇಲೆ ಬಿದ್ದ ಘಟನೆ ನಡೆದಿದೆ.

ಈ ಘಟನೆಯಿಂದ ಸೋನಿಯಾ ಅವರು ತುಸು ವಿಚಲಿತರಾದರು. ತಕ್ಷಣವೇ ಸೋನಿಯಾ, ಪಕ್ಷದ ಖಜಾಂಚಿ ಪವನ್ ಬನ್ಸಾಲ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪಕ್ಷದ ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡು ಪ್ರದರ್ಶಿಸಿದರು.
ನಂತರ ಪಕ್ಷದ ಕಾರ್ಯಕರ್ತರೊಬ್ಬರು ಧ್ವಜವನ್ನು ಸರಿಯಾಗಿ ಕಟ್ಟಲಾಗಿದೆಯೇ ಎಂದು ಪರೀಕ್ಷಿಸಿದ ಬಳಿಕ ಸೋನಿಯಾ ಎರಡನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಎ.ಕೆ. ಆಯಂಟನಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಘಟನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು, ಇಂಥ ಕಾರ್ಯಕ್ರಮಗಳನ್ನು ಆಯೋಜಿಸುವಾಗ ಭವಿಷ್ಯದಲ್ಲಿ ಹೆಚ್ಚು ಜಾಗರೂಕರಾಗಿ ಇರಬೇಕು ಎಂದು ಆಯೋಜಕರಿಗೆ ಸಲಹೆ ನೀಡಿದ್ದಾರೆ.