ತಿರುವನಂತಪುರ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಬಗ್ಗೆ ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪ್ರಸ್ತುತ ಕೇರಳದಲ್ಲಿ ಯಾವುದೇ ಭೀತಿ ಇಲ್ಲ ಮತ್ತು ಮುಂದಿನ 5 ದಿನಗಳ ಕಾಲ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಿಂದೂ ಮಹಾಸಾಗರದ ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಕೇಂದ್ರೀಕೃತವಾಗಿದೆ. ಮುಂದಿನ 24 ಗಂಟೆಗಳಲ್ಲಿ ಭೂಮಧ್ಯ ರೇಖೆ ಹಾಗೂ ಅದಕ್ಕೆ ಹೊಂದಿಕೊಂಡಿರುವ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಗಂಟೆಗಳಲ್ಲಿ ಈಶಾನ್ಯ ದಿಕ್ಕಿನಲ್ಲಿ ಮಾರುತ ಚಲಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೇರಳ-ಕರ್ನಾಟಕ-ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರಿಕೆಗೆ ನಿರ್ಬಂಧವಿಲ್ಲ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಆದರೆ, ಡಿಸೆಂಬರ್ 17ರಿಂದ 20ರವರೆಗೆ ಕನ್ಯಾಕುಮಾರಿ ಪ್ರದೇಶದಲ್ಲಿ ಗಂಟೆಗೆ 35ರಿಂದ 45 ಕಿ.ಮೀ. ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಈ ದಿನ ಮೀನುಗಾರರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.