ನವದೆಹಲಿ: ಮಕ್ಕಳಿಗೆ ಕೋವಿಡ್-19 ಲಸಿಕೆ ನೀಡುವ ಸರ್ಕಾರದ ನಿರ್ಧಾರ ಅವೈಜ್ಞಾನಿಕವಾಗಿದೆ. ಇದರಿಂದ ಹೆಚ್ಚಿನ ಪ್ರಯೋಜನವಾಗದು ಎಂದು ಏಮ್ಸ್‌ನ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಡಾ. ಸಂಜಯ್ ಕೆ ರೈ ಹೇಳಿದ್ದಾರೆ.
ನವದೆಹಲಿ: ಮಕ್ಕಳಿಗೆ ಕೋವಿಡ್-19 ಲಸಿಕೆ ನೀಡುವ ಸರ್ಕಾರದ ನಿರ್ಧಾರ ಅವೈಜ್ಞಾನಿಕವಾಗಿದೆ. ಇದರಿಂದ ಹೆಚ್ಚಿನ ಪ್ರಯೋಜನವಾಗದು ಎಂದು ಏಮ್ಸ್‌ನ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಡಾ. ಸಂಜಯ್ ಕೆ ರೈ ಹೇಳಿದ್ದಾರೆ.
ಏಮ್ಸ್‌ನಲ್ಲಿ ವಯಸ್ಕರು ಹಾಗೂ ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆಯ ಪ್ರಯೋಗ ನಡೆಸಿದ್ದ ಸಂದರ್ಭದಲ್ಲಿ ಡಾ.ಸಂಜಯ್ ಪ್ರಮುಖ ವೀಕ್ಷಕರಾಗಿದ್ದರು. 'ಭಾರತೀಯ ಸಾರ್ವಜನಿಕ ಆರೋಗ್ಯ ಸಂಘ'ದ ಅಧ್ಯಕ್ಷರೂ ಆಗಿದ್ದಾರೆ.
ಸರ್ಕಾರವು ನಿರ್ಧಾರ ಕೈಗೊಳ್ಳುವುದಕ್ಕೂ ಮುನ್ನ ಈಗಾಗಲೇ ಮಕ್ಕಳಿಗೆ ಲಸಿಕೆ ನೀಡುತ್ತಿರುವ ರಾಷ್ಟ್ರಗಳಿಂದ ದತ್ತಾಂಶಗಳನ್ನು ತರಿಸಿ ವಿಶ್ಲೇಷಿಸಬೇಕಿತ್ತು ಎಂದು ಅವರು ಹೇಳಿದ್ದಾರೆ.
'ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದು, ಸೂಕ್ತ ಸಮಯದಲ್ಲಿ ಸರಿಯಾದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಹೀಗಾಗಿ ನಾನು ಅವರ ದೊಡ್ಡ ಅಭಿಮಾನಿ. ಆದರೆ ಮಕ್ಕಳಿಗೆ ಲಸಿಕೆ ನೀಡುವ ಅವೈಜ್ಞಾನಿಕ ನಿರ್ಧಾರದಿಂದ ಸಂಪೂರ್ಣ ಹತಾಶೆಯಾಗಿದೆ' ಎಂದು ಅವರು ಹೇಳಿದ್ದಾರೆ.
ಶನಿವಾರ ರಾತ್ರಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಮೋದಿ, ಜನವರಿ 3ರಿಂದ 15ರಿಂದ 18 ವರ್ಷದೊಳಗಿನವರಿಗೆ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಘೋಷಿಸಿದ್ದರು.