'ನಾಗಾಲ್ಯಾಂಡ್ ಘಟನೆಗೆ ಸಂಬಂಧಿಸಿ ಸಂಸತ್‌ನ ಉಭಯ ಸದನಗಳಲ್ಲಿ ಗೃಹ ಸಚಿವರು ವಿಸ್ತೃತ ಹೇಳಿಕೆ ನೀಡಬೇಕು ಎಂದು ನಾವು ಆಗ್ರಹಿಸುತ್ತೇವೆ. ಅದು ತುಂಬಾ ಸೂಕ್ಷ್ಮ ಘಟನೆ. ಅದು ನಡೆಯಬಾರದಿತ್ತು. ಘಟನೆಗೆ ಕಾರಣವೇನು ಎಂಬುದನ್ನು ಗೃಹ ಸಚಿವರು ತಿಳಿಸಬೇಕು' ಎಂದು ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಈ ಮಧ್ಯೆ, ನಾಗಾಲ್ಯಾಂಡ್‌ನಲ್ಲಿ ನಾಗರಿಕರ ಹತ್ಯೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸಂಸತ್ ಭವನದಲ್ಲಿ ಸಚಿವರ ಸಭೆ ಕರೆದಿದ್ದಾರೆ.
ನಾಗರಿಕರ ಹತ್ಯೆ ವಿಚಾರವಾಗಿ ಸಂಸತ್‌ನ ಉಭಯ ಸದನಗಳನ್ನು ಉದ್ದೇಶಿಸಿ ಗೃಹ ಸಚಿವ ಅಮಿತ್ ಶಾ ಮಾತನಾಡಲಿದ್ದಾರೆ ಎಂದು 'ಎಎನ್‌ಐ' ಸುದ್ದಿಸಂಸ್ಥೆ ವರದಿ ಮಾಡಿದೆ.
ನಾಗಾಲ್ಯಾಂಡ್‌ನ ಮೊನ್ ಜಿಲ್ಲೆಯ ಟಿರು ಮತ್ತು ಒಟಿಂಗ್ ಗ್ರಾಮಗಳಲ್ಲಿ 14 ನಾಗರಿಕರನ್ನು ಭದ್ರತಾ ಪಡೆಗಳ ಸಿಬ್ಬಂದಿ ಗುಂಡಿಟ್ಟು ಕೊಂದಿದ್ದಾರೆ. ದಾಳಿಯಲ್ಲಿ 11 ನಾಗರಿಕರು ಗಾಯಗೊಂಡಿದ್ದಾರೆ. ಘಟನೆ ಶನಿವಾರ ಸಂಜೆಯ ಹೊತ್ತು ನಡೆದಿತ್ತು ಎಂದು ಭಾನುವಾರ ವರದಿಯಾಗಿತ್ತು.